7:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮಾಣಿ ಬಾಲ ವಿಕಾಸದ ಕೃತಿ ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ: ಸನ್ಮಾನ

13/12/2025, 19:37

ಬಂಟ್ವಾಳ(reporterkarnataka.com): ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ 17ರ ವಯೋಮಾನದ ಹುಡುಗಿಯರ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಮಾಣಿ- ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕೃತಿ ಎನ್.ಪಿ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಪ್ರಹ್ಲಾದ್ ಶೆಟ್ಟಿ ಜೆ, ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ,ಮುಖ್ಯಶಿಕ್ಷಕಿ ಸುಪ್ರಿಯಾ ಡಿ. ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಮತ್ತು ಸೌಮ್ಯ ಎಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪೋಷಕರಾದ ಸುಚೇತ್ ಶೆಟ್ಟಿ ಮಿತ್ತಿಮಾರು ಉಪಸ್ಥಿತರಿದ್ದರು.
ಡಿಸೆಂಬರ್ 3ರಿಂದ 6ರ ವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಡಿಸೆಂಬರ್ 13 ರಿಂದ 15 ರವರೆಗೆ ಲಕ್ನೋದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶವನ್ನು ಪಡೆದುಕೊಂಡಿದ್ದಾಳೆ.
ಕಲ್ಲಡ್ಕ ಸಮೀಪದ ನೆಟ್ಲ ನಿವಾಸಿಗಳಾದ ದಿನೇಶ್ ಬಿ ಮತ್ತು ತೇಜಾಕ್ಷಿ ದಂಪತಿ ಪುತ್ರಿಯಾಗಿರುವ ಈಕೆಗೆ ಬಾಲವಿಕಾಸ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದಿನಕರ್ ಪೂಜಾರಿ ಮತ್ತು ಸೌಮ್ಯ ಎಸ್ ಹಾಗೂ ಪೆರ್ಮನ್ನೂರು ಬಬ್ಬುಕಟ್ಟೆ ಪ್ರೌಢಶಾಲೆಯ ಗಣೇಶ್ ಕುಲಾಲ್ ಕೊಲ್ಯ ತರಬೇತಿ ನೀಡಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು