7:39 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಮಾಣಿಬೆಟ್ಟುಗುತ್ತು: ಏ.4ರಂದು 3ನೇ ವರ್ಷದ ಹೊನಲು ಬೆಳಕಿನ ಗುರುಪುರ ಜೋಡುಕೆರೆ ಕಂಬಳ

26/03/2026, 18:08

ಮಂಗಳೂರು(reporterkarnataka.com): ಮೂಳೂರು-ಅಡ್ಡೂರು ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಮೂರನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕೆರೆ ಗುರುಪುರ ಕಂಬಳ ಏಪ್ರಿಲ್ 4ರಂದು ಗುರುಪುರದ ಮಾಣಿಬೆಟ್ಟುಗುತ್ತುವಿನಲ್ಲಿ ನಡೆಯಲಿದೆ.
ಮೂಳೂರು-ಟಡ್ಡೂರು ಜೋಡುಕೆರೆ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.
ಶನಿವಾರ ಬೆಳಗ್ಗೆ 9.30ಕ್ಕೆ ಬಂಟರ ಯನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಕಂಬಳ ಉದ್ಘಾಟಿಸಲಿದ್ದು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಮೂಳೂರು-ಟಡ್ಡೂರು ಜೋಡುಕೆರೆ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ವಹಿಸಲಿದ್ದಾರೆ ಎಂದರು.
ಗೌರವ ಉಪಸ್ಥಿತಿಯಲ್ಲಿ ಮೂಳೂರು ಮಂಡಿತ್ತಾಯ ದೈವಸ್ಥಾನದ ತಂತ್ರಿ ಜಿ.ಟಿ. ವಾಸುದೇವ ಭಟ್, ಜಿಲ್ಲಾ ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಗುಣಪಾಲ ಕಡಂಬ, ಬೊಳ್ಮಾರಗುತ್ತು ಶಶಿಧರ್ ಭಟ್, ಗೋಳಿದಡಿಗುತ್ತು ಗಡಿಕಾರ ವರ್ಧಮಾನ್ ಶೆಟ್ಟಿ, ಕೊಡೆತ್ತೂರುಗುತ್ತು ಗುತ್ತಿನವರಾದ ನಿತಿನ್ ಶೆಟ್ಟಿ, ಬೆಳ್ಳೂರಿನ ಶ್ರೀ ಕಾವೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾದ ರಘು ಶೆಟ್ಟಿ ಭಾಗವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ.
ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಬಮುಲ್‌ನ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಉದ್ಘಾಟಿಸಲಿದ್ದಾರೆ. ಘನ ಉಪಸ್ಥಿತಿಯಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇರುವರು. ಅಧ್ಯಕ್ಷತೆಯನ್ನು ಮೂಳೂರು-ಟಡ್ಡೂರು ಜೋಡುಕೆರೆ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ವಹಿಸಲಿದ್ದಾರೆ ಎಂದರು.
ಗೌರವ ಉಪಸ್ಥಿತಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್‌ಸಿ ಮಂಜುನಾಥ ಭಂಡಾರಿ, ಮಾಜಿ ಸಚಿವರುಗಳಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಎಂಎಲ್‌ಸಿ ಐವನ್ ಡಿಸೋಜಾ, ಶಾಸಕ ಅಶೋಕ್ ಕುಮಾರ್ ರೈ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಶ್ರೀ ಕ್ಷೇತ್ರ ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಮಾಜಿ ಶಾಸಕರುಗಳಾದ ಜೆ.ಆರ್. ಲೋಬೊ, ಶಕುಂತಳಾ ಟಿ. ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರಮರ್ತಕರಾದ ನಾಡೋಜ ಡಾ. ಜಿ. ಶಂಕರ್ ಮತ್ತಿತರರು ಉಪಸ್ಥಿತರಿರುವರು ಎಂದು ತಿಳಿಸಿದರು.
ತುಳುನಾಡಿನ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಕಂಬಳ ನಡೆಯುವ ಸಂದರ್ಭದಲ್ಲಿ ಯಕ್ಷಗಾನ, ಕಂಬಳ ಸಾಧಕರಿಗೆ ಸನ್ಮಾನ, ಫುಡ್ ಫೆಸ್ಟಿವಲ್, ಕನೆ ಹಲಗೆ ವಿಭಾಗದಲ್ಲಿ ನೀರು ಹಾಯಿಸಿದ ಎಲ್ಲಾ ಕೋಣಗಳಿಗೆ 1 ಗ್ರಾಂ ಚಿನ್ನದ ಪದಕ, ಭಾಗವಹಿಸಿದ ಎಲ್ಲಾ ವಿಭಾಗದ ಕೋಣಗಳ ಮಾಲಕರಿಗೆ ಬೆಳ್ಳಿಯ ನಾಣ್ಯ ಹಾಗೂ ಎಲ್ಲಾ ಕೋಣಗಳಿಗೆ 30 ಕೆ.ಜಿ. ಹುರುಳಿ ನೀಡಲಾಗುವುದು, ಇದರೊಂದಿಗೆ ಎರಡು ದಿನ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.



ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಬಿ.ಎಂ. ಪದ್ಮನಾಥ ಕೋಟ್ಯಾನ್, ಗುಣಪಾಲ್ ಕಡಂಬ, ಲೋಕೇಶ್ ಶೆಟ್ಟಿ ಮುಚ್ಚೂರು, ಪುರುಷೋತ್ತಮ ಚಿತ್ರಾಪುರ, ಆರ್.ಕೆ. ಪೃಥ್ವಿರಾಜ್, ಯಶವಂತ್ ಶೆಟ್ಟಿ, ಪದ್ಮನಾಭ ಶೆಟ್ಟಿ, ಉಮೇಶ್ ಶೆಟ್ಟಿ, ಹರೀಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು