12:59 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಾಣಿಲ ದುರ್ಗಾಮಹಾಲಕ್ಷ್ಮಿ ಕ್ಷೇತ್ರದ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

19/08/2023, 22:20

ಮಂಗಳೂರು(reporterlarnataka.com): ಮಾಣಿಲ ದುರ್ಗಾಮಹಾಲಕ್ಷ್ಮಿ ಕ್ಷೇತ್ರದಲ್ಲಿ ನಡೆಯಲಿರುವ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಗರದ ಶಾರದಾ ಸಭಾಂಗಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಶನಿವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು,
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ನಂಬಿಕೆ ಹೊಂದಿರುವಂತಹ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಳೆಗಾಲದಲ್ಲಿಯೂ ಕೂಡ ಇಂತಹ ಕಾರ್ಯಕ್ರಮ ಮಾಡಬಹುದು ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿ ಆಗಿದೆ ಎಂದು ಹೇಳಿದರು.

ಶ್ರೀಧಾಮ ಮಾಣಿಲದ ವರಮಹಾಲಕ್ಷ್ಮಿ ವ್ರತಾಚರಣೆಯ ಬೆಳ್ಳಿ ಮಹೋತ್ಸವದ ವಿಶೇಷ ಸಂಭ್ರಮದ ಸಮಾರಂಭ ಜಿಲ್ಲೆಯಲ್ಲಿ ಒಂದು ಕಾರ್ಯಕ್ರಮವಾಗಿ ಹೊರಹೊಮ್ಮಲಿದೆ. ಮಾಣಿಲ ಕ್ಷೇತ್ರ ಹಾಗೂ ಸ್ವಾಮೀಜಿ ಕರ್ಮಯೋಗಿ, ಇದೊಂದು ವಿಶಿಷ್ಟ ಮಹೋತ್ಸವವಾಗಿದೆ. ಮಾಣಿಲ ಸ್ವಾಮೀಜಿ ಸಾಮಾಜಿಕ ಕಳಕಳಿ ಹೊಂದಿದವರು. ಅವರ ಕರ್ಮಯೋಗಿ ಆಗಿದ್ದಾರೆ. ಹಿಂದೂ ಸಮಾಜದ ಎಲ್ಲ ಕಾರ್ಯಗಳಿಗೆ ಗಟ್ಟಿಯಾಗಿ ನಿಲ್ಲುವಂತಹ ಸ್ವಾಮೀಜಿ ಆಗಿದ್ದಾರೆ ಎಂದರು.
ಈ ಕಾರ್ಯಕ್ರಮದ ಜನರಿಗೆ ಮಹತ್ವ ತಿಳಿಸುವ ಕೆಲಸ ಆಗಬೇಕು. ಜನರನ್ನು ಈ ಕಾರ್ಯಕ್ರಮ ಆಕರ್ಷಿಸುವ ಕೆಲಸ ಆಗಬೇಕು. ಈಗಾಗಲೇ ಈ ಕಾರ್ಯಕ್ರಮಕ್ಕೆ ಹಲವಾರು ತಯಾರಿಗಳು, ಸಮಿತಿ ರಚನೆ ಕಾರ್ಯ ಮೋನಪ್ಪ ಭಂಡಾರಿ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ಇದೇ 24 ರಿಂದ 27ವರಿಗೆ ನಡೆಯುವ ಸಾಮಾಜಿಕ ಕಾರ್ಯಗಳಿಗೆ ನಾವು ಜತೆಯಾಗಿ ನಿಲ್ಲಬೇಕು. ಸ್ವಾಮೀಜಿ ಅವರ ಪರವಾಗಿ ನಾವೇ ಆಮಂತ್ರಣ ಪತ್ರಿಕೆ ಹಂಚುವ ಕೆಲಸ ಮಾಡಬೇಕು ಎಂದು ಹೇಳಿದರು.
ಇದೇ ಮೊದಲ ಬಾರಿಗೆ ಮಳೆಗಾಲದಲ್ಲಿಯೂ ಇಂತಹ ದೊಡ್ಡ ಪ್ರಮಾಣದ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಶ್ರೀಧಾಮಕ್ಕೆ ಇಂತಹ ಕಾರ್ಯಕ್ರಮಕ್ಕೆ ಹೆಚ್ಚು ಜನರು ಬರುತ್ತಾರೆ ಎನ್ನುವ ವಿಶ್ವಾಸ ಇದೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪಾವನ ಆಗಬೇಕು ಎಂದು ಕರೆ ನೀಡಿದರು.
ಮಾಣಿಲ ದುರ್ಗಾಮಹಾಲಕ್ಷ್ಮಿ ಕ್ಷೇತ್ರದಲ್ಲಿ ನಡೆಯಲಿರುವ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮದ ಅಧ್ಯಕ್ಷ ಮೋನಪ್ಪ ಭಂಡಾರಿ ಅವರು ಕಾರ್ಯಕ್ರಮದ ರೂಪರೇಷಗಳ ಕುರಿತು ಮಾಹಿತಿ ನೀಡಿದರು.
ಕಲ್ಕೂರು ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ್, ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ಉಪಮೇಯರ್ ಪೂರ್ಣಿಮಾ, ಪಾಲಿಕೆ ಸದಸ್ಯ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು