12:11 PM Saturday24 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಮಣಿನಾಲ್ಕೂರು: ‘ಯಕ್ಷ ಧ್ರುವ- ಯಕ್ಷ ಶಿಕ್ಷಣ’ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

28/06/2024, 11:49

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯನ್ನು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ಸುಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕ
ಅಶೋಕ್ ಶೆಟ್ಟಿ ಸರಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಶೆಟ್ಟಿ ಅಮೈ, ಪಟ್ಲ ಫೌಂಡೆಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ್ ಶೆಟ್ಟಿ ದಂಡೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಕೋಡಿಮಾರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ, ಹಾಗೂ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ಅವರು ಉಪಸ್ಥಿತರಿದ್ದರು. ಶಿಕ್ಷಕ ಉದಯ ಕುಮಾರ್ ಸ್ವಾಗತಿಸಿದರು.
ಶಾಲಾ ಶಿಕ್ಷಕಿ ರಾಜೇಶ್ವರಿ .ಜಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಸೌಮ್ಯ ವಂದಿಸಿದರು. ಯಕ್ಷಶಿಕ್ಷಣದ ಯಕ್ಷ ಗುರುಗಳಾದ ಸಾಯಿ ಸುಮ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ , ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಸಂಸ್ಥೆಯ ದೈಹಿಕ ಶಿಕ್ಷಕ ಪ್ರಕಾಶ್ ಟಿ , ಶಿಕ್ಷಕಿ ನೇಹಾ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು