9:11 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮಣಿಪಾಲ: ಪತ್ನಿಯ ಅಗಲುವಿಕೆ ದುಃಖ ತಾಳಲಾಗದೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

16/02/2023, 19:45

ಮಣಿಪಾಲ(reporterkarnataka.com): ಹೆಂಡತಿ ಅಗಲಿದ ಕಾರಣ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಎಂಐಟಿಯಲ್ಲಿ ನಡೆದಿದೆ.

ಕೃಷ್ಣಾನಂದ ಶೆಣೈ (50) ಆತ್ಮಹತ್ಯೆ ಮಾಡಿಕೊಂಡವರು. ಅಲೆವೂರಿನ ಮೂಡುಅಲೆವೂರು ನಿವಾಸಿಯಾಗಿದ್ದು ಮಣಿಪಾಲ ಎಂಐಟಿಯಲ್ಲಿ ಸೆಕ್ಯೂರಿಟಿ ವಿಭಾಗದಲ್ಲಿ ಅಟೆಂಡರ್‌ಆಗಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.

8 ತಿಂಗಳ ಹಿಂದೆ ಇವರ ಹೆಂಡತಿ ಮೃತಪಟ್ಟಿದ್ದರು. ಆ ಬಳಿಕ ಕೃಷ್ಣಾನಂದ ಶೆಣೈ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಚಿಂತೆಯಲ್ಲಿ ಫೆ.14ರಂದು ತಾನು ಕೆಲಸ ಮಾಡುವ ಎಂಐಟಿಯ ಎಬಿ -1 ಬ್ಲಾಕ್ ‌ನ 2 ನೇ ಮಹಡಿ ರೂಮ್ ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು