12:50 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಮಣಿಪುರದಲ್ಲಿ ಕ್ರೈಸ್ತರ ಮೇಲೆ ದೌರ್ಜನ್ಯ: ಮಂಗಳೂರಿನಲ್ಲಿ ಸಮಾನ ಮನಸ್ಕರ ಪ್ರತಿಭಟನೆ; ಕೇಂದ್ರ ಸರಕಾರ ಮಧ್ಯಪ್ರವೇಶಕ್ಕೆ ಆಗ್ರಹ

06/06/2023, 22:22

ಮಂಗಳೂರು(reporterkarnataka.com): ಮಣಿಪುರದಲ್ಲಿ ಕ್ರಿಶ್ಚಿಯನರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮಂಗಳವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ದ.ಕ.ಜಿಲ್ಲೆ, ಮಂಗಳೂರು ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಯುನೈಟೆಡ್ ಕ್ರಿಶ್ಚಿಯನ್ ಫೋರಂ,ಮಂಗಳೂರು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.


ಮಣಿಪುರ ರಾಜ್ಯದಲ್ಲಿ ಬುಡಕಟ್ಟು ಜನರ ಮೀಸಲಾತಿ ವಿಚಾರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಚರ್ಚ್ ಗಳು ಹಾಗೂ ಕ್ರಿಶ್ಚಿಯನ್ ರ ಮೇಲೆ ನಡೆದ ವ್ಯಾಪಕ ದಾಳಿಯನ್ನು ಖಂಡಿಸಿದರು. ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಆಗ್ರಹಿಸಿದರು.
ಮಣಿಪುರದಲ್ಲಿ ಬಹುಸಂಖ್ಯಾತರಾಗಿರುವ ಕ್ರಿಸ್ಚಿಯನ್ ಸಮುದಾಯದ ನಡುವೆ ಸೌಹಾರ್ದ ವಾತಾವರಣವನ್ನು ಸಾಧಿಸುವ ಬದಲು, ಅಲ್ಲಿನ ಬಿಜೆಪಿ ರಾಜ್ಯ ಸರಕಾರವು ದ್ವೇಷದ ರಾಜಕಾರಣವನ್ನು ನಡೆಸುತ್ತಿದೆ. ಮೈತೈ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಭುಗಿಲೆದ್ದ ಗಲಭೆ ಮುಂದಿಟ್ಟು ಕ್ರಿಶ್ಚಿಯನ್ನರ ಹಾಗೂ ಅವರ ಚರ್ಚ್ ಗಳ ಮೇಲೆ ವ್ಯಾಪಕ ದಾಳಿಗಳನ್ನು ನಡೆಸುತ್ತಿರುವ ದೌರ್ಜನ್ಯ ನಿಲ್ಲಬೇಕು. ಸಾಕಷ್ಟು ಸಂಖ್ಯೆಯ ಜನರು ಸಂತ್ರಸ್ತರಾಗಿದ್ದಾರೆ. ಕರ್ಫ್ಯೂ ಕೂಡ ಹಾಕಲಾಗಿದೆ. ದೂರಸಂಪರ್ಕ,ಇಂಟರ್ ನೆಟ್ ಸೇರಿದಂತೆ ಎಲ್ಲಾ ಸಂಪರ್ಕಗಳನ್ನು ಕಡಿತಗೊಳಿಸಲಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ದೇಶದ ಒಂದು ಪುಟ್ಟ ರಾಜ್ಯದಲ್ಲಿ ಇಂತಹ ಗಂಭೀರ ಸಮಸ್ಯೆ ತಲೆದೋರಿದೆ. ಆದರೆ ಕೇಂದ್ರ ಸರಕಾರವು ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ಖಂಡನೀಯ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ರೊಯ್ ಕ್ಯಾಸ್ಟಲಿನೊ ಅವರು ಮಾತನಾಡಿ, ಮಣಿಪುರ ರಾಜ್ಯದಲ್ಲಿ ಗಲಭೆಯನ್ನು ಸಂಪೂರ್ಣವಾಗಿ ನಿಯಂತ್ರಿಸಿ, ಮತ್ತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ತೀರ ಕಡಿಮೆ ಜನಸಂಖ್ಯೆಯ ಮಣಿಪುರ, ರಾಜಕೀಯ ಮತ್ತು ಸಾಮಾಜಿಕವಾಗಿ ಅಸಮತೋಲನದಿಂದ ಕೂಡಿದೆ. ಇಲ್ಲಿನ ಬುಡಕಟ್ಟು ಜನರು ಶಾಂತಿಯುತವಾಗಿ ಮೀಸಲಾತಿಗಾಗಿ ಮೆರವಣಿಗೆ ನಡೆಸಿದರು. ಆದರೆ ಇದನ್ನು ಸಮಾಜ ವಿರೋಧಿ ಶಕ್ತಿಗಳು ಹಿಂಸಾಚಾರಕ್ಕೆ ತಿರುಗಿಸಿದ್ದಾರೆ ಎಂದರು.
ಸುನಿಲ್ ಕುಮಾರ್ ಬಜಾಲ್, ಆಲ್ಫ್ರೆಡ್ ಮನೋಹರ್, ಸ್ಟ್ಯಾನಿ ಲೋಬೊ, ಕೆ ಅಶ್ರಫ್, ಮಂಜುಳಾ ನಾಯಕ್, ಫಾದರ್ ಮ್ಯಾಕ್ಸಿಂ ನೊರೊನ್ಹಾ, ಆಲ್ಫ್ರೆಡ್, ಅನಿಲ್ ಸಿಕ್ವೇರ, ನೊರಿನಾ ಪಿಂಟೋ, ಮೊಹಮದ್ ಕುಂಜತ್ತಬೈಲ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು