3:48 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಂಜೇಶ್ವರ: 9ರ ಹರೆಯದ ಪುಟ್ಟ ಬಾಲಕಿಯ ನೆಲಕ್ಕಪ್ಪಳಿದ ದುಷ್ಟ: ಸಿಸಿ ಕ್ಯಾಮೆರಾ ದೃಶ್ಯ ವೈರಲ್

18/11/2022, 12:55

ಮಂಜೇಶ್ವರ(reporterkarnataka.com): ಒಂಟಿಯಾಗಿ ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಯುವಕನೋರ್ವ ಅನಾಮತ್ತಾಗಿ ಎತ್ತಿ ನೆಲಕ್ಕೆ ಅಪ್ಪಳಿಸಿದ ಅಮಾನವೀಯ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ.
ಸಿಸಿ ಟಿವಿ ಫೋಟೇಜ್ ಆಧಾರದಲ್ಲಿ ಈ ಘಟನೆ ಗುರುವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.

ನೆಲಕ್ಕಪ್ಪಳಿಸಿದ ರಭಸದಲ್ಲಿ 9ರ ಹರೆಯದ ಬಾಲಕಿಯ ಸೊಂಟ ಹಾಗೂ ಬೆನ್ನಿನ ಮೂಳೆಗಳಿಗೆ ಘಾಸಿಯಾಗಿದೆ ಎನ್ನಲಾಗಿದೆ. ಬಾಲಕಿಯನ್ನು
ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಮಂಜೇಶ್ವರ ಕುಂಜತ್ತೂರಿನ ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯ ಹತ್ತಿರ ಬಂದ ಈತ ಬಾಲಕಿಯನ್ನು ಮೇಲಕ್ಕೆತ್ತಿ ಎಸೆದಿದ್ದು, ಕೃತ್ಯದ ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದ.

ಬಾಲಕಿಯ ಪೋಷಕರು ನೀಡಿದ ದೂರಿನಂತೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿರುವುದಾಗಿ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು