7:24 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯ: ನೂತನ ಕುಲಸಚಿವರಾಗಿ ಮೊಹಮ್ಮದ್ ನಯೀಮ್ ಮೊಮಿನ್ ಅಧಿಕಾರ ಸ್ವೀಕಾರ

25/07/2023, 18:43

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ 17ನೇ ಕುಲಸಚಿವ (ಆಡಳಿತ) ರಾಗಿ ಮೊಹಮ್ಮದ್ ನಯೀಮ್ ಮೊಮಿನ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಕೆಎಎಸ್ ಹಿರಿಯ ಅಧಿಕಾರಿಯಾದ ಮೊಮಿನ್ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯವರು.
ಬೀದರ್ ಮತ್ತು ಹಾಸನ ಜಿಲ್ಲೆಗಳಲ್ಲಿ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಧಾನ ಸೌಧದಲ್ಲಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಏಪ್ರಿಲ್, 2021ರಿಂದ ಕುಲಸಚಿವರಾಗಿದ್ದ ಡಾ. ಕಿಶೋರ್ ಕುಮಾರ್ ಸಿ. ಕೆ ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು.

ಕುಲಪತಿ ಪ್ರೊ. ಜಯರಾಜ್ ಅಮೀನ್, ಕುಲಸಚಿವ (ಪರೀಕ್ಷಾಂಗ) ಡಾ. ರಾಜು ಕೃಷ್ಣ ಚಲನ್ನವರ್, ಹಣಕಾಸು ಅಧಿಕಾರಿ ಡಾ. ಸಂಗಪ್ಪ ವೈ, ವಿವಿಧ ನಿಕಾಯಗಳ ಡೀನರುಗಳು, ವಿಭಾಗ ಮುಖ್ಯಸ್ಥರುಗಳು ನೂತನ ಕುಲಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಡಾ. ಕಿಶೋರ್ ಕುಮಾರ್ ಸಿ. ಕೆ ಅವರು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು