4:00 AM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಣ್ಣಗುಡ್ಡ ವಾರ್ಡಿನ ಮಿಷನ್ ಗೋರಿ ರಸ್ತೆ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ್ ಕಾಮತ್ ಪರಿಶೀಲನೆ 

14/07/2022, 19:06

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ ವಾರ್ಡಿನಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ  ಮಿಷನ್ ಗೋರಿ ರಸ್ತೆಯನ್ನು ಶಾಸಕ ಡಿ. ವೇದವ್ಯಾಸ್ ಕಾಮತ್ ಪರಿಶೀಲನೆ ನಡೆಸಿ, ರಸ್ತೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಿಷನ್ ಗೋರಿಯಿಂದ ಮಠದಕಣಿ ಸಂಪರ್ಕಿಸುವ ರಸ್ತೆಯ ಅಗಲಿಕರಣ ಹಾಗೂ ಅಭಿವೃದ್ಧಿಯ ಬಹುಕಾಲದ ಬೇಡಿಕೆಯಂತೆ ಅನುದಾನ ಹೊಂದಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಒಳಚರಂಡಿ ವ್ಯವಸ್ಥೆಯ ಬಹಳಷ್ಟು ಹಳೆಯ ಕೊಳವೆಗಳ ಬದಲಾವಣೆ ಹಾಗೂ ರಸ್ತೆ ಅಗಲೀಕರಣ ಕಾಮಗಾರಿ ಭಾಗಶಃ ಪೂರ್ಣಗೊಂಡಿದೆ ಎಂದು ಶಾಸಕ ಕಾಮತ್ ಹೇಳಿದರು. 

24×7 ಕುಡಿಯುವ ನೀರು ಪೂರೈಸುವ ಜಲಸಿರಿ ಯೋಜನೆಯ ಪ್ರಮುಖ ಪೈಪ್ ಲೇನ್ ಕಾಮಗಾರಿ ಹಾಗೂ ಗೇಲ್ ಗ್ಯಾಸ್ ಲೇನ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಮನೆ ಮನೆಗೆ ಸಂಪರ್ಕ ಕಲ್ಪಿಸುವ ಕಾರ್ಯ ಆಗಬೇಕಿದೆ. ಪಾದಾಚಾರಿ ರಸ್ತೆ ನಿರ್ಮಾಣದ ಕಾಮಗಾರಿಯೂ ಕೂಡ ಪ್ರಗತಿಯ ಹಂತದಲ್ಲಿದ್ದು, ಪೂರ್ಣಗೊಂಡ ತಕ್ಷಣ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಕಾಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು‌. 

ಸದ್ಯ ವಿಪರೀತ ಮಳೆ ಸುರಿಯುತ್ತಿರುವುದರಿಂದ ಕಾಮಗಾರಿ ನಿರೀಕ್ಷಿತ ಮಟ್ಟದ ವೇಗದಲ್ಲಿ ಕಾಮಗಾರಿ ನಡೆಸಲಾಗುತ್ತಿಲ್ಲ. ಆದರೂ ಸಾರ್ವಜನಿಕರ ಸಮಸ್ಯೆಯನ್ನು ಪರಿಗಣಿಸಿ ಸಾಧ್ಯವಾದಷ್ಟು ಬೇಗನೇ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್, ಮುಖಂಡರಾದ ವಸಂತ್ ಶೇಟ್, ಗೋಕುಲ್ ದಾಸ್ ಭಟ್, ಮೋಹನ್ ಆಚಾರ್, ವಸಂತ್ ಜೆ ಪೂಜಾರಿ, ಸ್ಥಳೀಯ ಕಾರ್ಯಕರ್ತರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು