12:52 AM Wednesday30 - October 2024
ಬ್ರೇಕಿಂಗ್ ನ್ಯೂಸ್
ಪಿಎಲ್ಐ ಯೋಜನೆಯಡಿ ಮೆರಿಲ್ ಸುಧಾರಿತ ಉತ್ಪಾದನಾ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು…

ಇತ್ತೀಚಿನ ಸುದ್ದಿ

ಮಂಗಳೂರು: ಮತ್ತೆ ಕಳ್ಳರ ಗ್ಯಾಂಗ್ ಸಕ್ರೀಯ; 6 ಮನೆಗಳ ಕಳ್ಳತನ ಯತ್ನ; 2 ಮನೆಗಳಿಂದ 6 ಲಕ್ಷ ರೂ. ಮೌಲ್ಯದ ನಗ, ನಗದು ಕಳವು

11/11/2021, 14:53

ಮಂಗಳೂರು(reporterkarnataka.com): ನಗರದಲ್ಲಿ ಮತ್ತೆ ಅಪರಾಧ ಚಟುವಟಿಕೆಗಳು ತಲೆ ಎತ್ತಲಾರಂಭಿಸಿದೆ. ಕಳ್ಳತನ, ಲೂಟಿ, ದರೋಡೆ, ಕೊಲೆ, ಅತ್ಯಾಚಾರ ಸಕ್ರೀಯಗೊಳ್ಳಲಾರಂಭಿದೆ. 

ನಗರದ ಮಣ್ಣಗುಡ್ಡೆಯ ಗಾಂಧಿನಗರ 5ನೇ ಕ್ರಾಸ್‌ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಲಾಗಿದೆ. 2 ಮನೆಗಳಿಂದ ಸುಮಾರು 6 ಲಕ್ಷ ಮೌಲ್ಯದ ನಗ ಮತ್ತು ನಗದು ಕಳವು ಮಾಡಲಾಗಿದೆ.

ಇದೀಗ ನಗರದಲ್ಲಿ ಕಳ್ಳತನ ಹಾಗೂ ದರೋಡೆಕೋರರ ತಂಡವೊಂದು ಸಕ್ರೀಯವಾಗಿದೆ. ಸಿಸಿ ಟಿವಿ ಫೂಟೇಜ್ ನಿಂದ ಇದು ಸಾಬೀತಾಗಿದೆ.

ನಗರದ ಮಣ್ಣಗುಡ್ಡೆ, ಲೇಡಿಹಿಲ್ ಸೇರಿದಂತೆ ವಸತಿ ಪ್ರದೇಶದಲ್ಲಿ ಕಳ್ಳರ ಗ್ಯಾಂಗ್ ಕಾರ್ಯನಿರತವಾಗಿದೆ.  ಸಿಸಿ ಕ್ಯಾಮೆರಾ ಫೂಟೇಜ್ ನಲ್ಲಿ ಒಂದಿಬ್ಬರು ಚಲನವಲನ ಕಾಣುತ್ತಿದ್ದರೂ ಇದರ ಹಿಂದೆ ದೊಡ್ಡ ಗ್ಯಾಂಗ್ ಇರುವುದು ಸ್ಪಷ್ಟವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು