ಇತ್ತೀಚಿನ ಸುದ್ದಿ
ಬೆಂಗಳೂರಿಗೆ ಬಂದ ಹಲವು ಶಾಸಕರು ಎರಡೆರಡು ಮದುವೆ ಆಗಿದ್ದಾರೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
25/09/2026, 14:30
ಬೆಂಗಳೂರು(reporterkarnataka.com): ಹೌದು, ಶಾಸಕರ ಮದುವೆ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದು, ಬೆಂಗಳೂರಿಗೆ ಬಂದ ಶಾಸಕರು ಯಾರೂ ವಾಪಸ್ ಹೋಗ್ತಿಲ್ಲ. ಅದರ ಹಿಸ್ಟ್ರೀ ನನ್ನ ಬಳಿ ಇದೆ, ಎರಡೆರಡು ಮದುವೆ ಆಗಿದ್ದಾರೆ. ಅದು ಒಂದು ಡಜನ್ ಇದೆ, ನಾನು ಬೇಕಿದ್ರೆ ಅದರ ಪಟ್ಟಿ ಹೇಳ್ತೀನಿ. ಧಾರವಾಡ, ಕಾರವಾರ, ದಕ್ಷಿಣ ಕನ್ನಡ ಜಿಲ್ಲೆಯವರನ್ನೂ ಹೇಳ್ತೀನಿ. ಆದರೆ ಆ ರೀತಿಯ ಪರಿಸ್ಥಿತಿ ಬೇಡ. ಬೆಂಗಳೂರಿಗೆ ಬಂದವರು ಯಾರೂ ಬಿಟ್ಟು ವಾಪಸ್ ಹೋಗ್ತಿಲ್ಲ. ಅದಕ್ಕಾಗಿ ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದೆ ಎಂದು ಸಿಎಂ ಹೇಳಿರೋದು ಹೊಸ ಚರ್ಚೆ ಹುಟ್ಟುಹಾಕಿದೆ.
*ಸಿಎಂ ಹೇಳಿಕೆಗೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಆಕ್ಷೇಪ*
ಇನ್ನು ಸಿಎಂ ನೀಡಿರುವ ಈ ಹೇಳಿಕೆ ಬಗ್ಗೆ ಬಿಜೆಪಿ ಹಿರಿಯ ಶಾಸಕ ಎಸ್. ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿನ್ನೆ ನಾನು ಸಂಜೆ ನನ್ನ ಗೆಳೆಯರೊಬ್ಬರು ಆಸ್ಪತ್ರೆಯಲ್ಲಿ ಇದ್ದ ಕಾರಣ ಅವರನ್ನು ಕಾಣಲು ಸದನದಿಂದ ಕೊಂಚ ಮುಂಚೆ ಹೊರಟೆ. ಮುಖ್ಯಮಂತ್ರಿಗಳು ಸದನದಲ್ಲಿ ಉತ್ತರ ಕೊಡುವಾಗ ನಾನು ಇರಲು ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿಗಳು ನೀಡಿರುವ ಉತ್ತರ ಲಘುವಾಗಿಯೇ ಇರಬಹುದು. ಆದರೆ ಈ ರೀತಿಯ ಉತ್ತರ ವಿಧಾನಸಭಾ ವೇದಿಕೆಯಿಂದ ಮಾತನಾಡುವುದು ಯಾರಿಗೂ ಘನತೆ ತರುವ ವಿಚಾರವಲ್ಲ. ನಾಡಿನ ಮುಖ್ಯಮಂತ್ರಿಗಳು ಈ ರೀತಿ ಹೇಳಬಾರದಿತ್ತು. ಇದು ಯಾರಿಗೂ ಗೌರವ ತರುವ ಸಂಗತಿಯಲ್ಲ. ಸದನದ ಗಾಂಭೀರ್ಯತೆಗೆ ತಕ್ಕ ಸಂಗತಿಯಲ್ಲ. ನಾನು ಸದನದಲ್ಲಿ ಇದ್ದಿದ್ದರೆ ಕೂಡಲೇ ಪ್ರತಿಕ್ರಿಯಿಸುತ್ತಿದ್ದೆ ಎಂದು ತಿಳಿಸಿದ್ದಾರೆ.












