10:20 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಮರ ಬಿದ್ದು ಯುವಕ ಸಾವು: ಶವಾಗಾರದಿಂದಲೇ ಅರಣ್ಯ ಇಲಾಖೆ ಬೇಜವಾಬ್ದಾರಿ ಕುರಿತು ಅಧಿಕಾರಿಗಳಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ತರಾಟೆ

27/07/2024, 21:19

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಆಕೇಶಿಯಾ ಮರ ಬಿದ್ದು ಸಾವನ್ನಪ್ಪಿದ ಪ್ರಕರಣ ಕುರಿತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ ಕುರಿತು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.


ತೀರ್ಥಹಳ್ಳಿಯ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಚದಕಟ್ಟೆ ಸಮೀಪ ಮೀನ್ಮನೆಕೊಪ್ಪ ಸಚಿನ್ (26) ಎಂಬ ಯುವಕನ ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿ ಭಾಗಿ ನಿಂತ ಆಕೇಶಿಯ ಮರ ತಲೆಯಮೇಲೆ ಬಿದ್ದು ಸಾವನ್ನಪ್ಪಿದ್ದರು. ಈ ರಸ್ತೆ ಅಕ್ಕ ಪಕ್ಕದಲ್ಲಿ ಬೆಳೆದು ನಿಂತಿರುವ ಅಕೇಶಿಯಾ ಮರಗಳ ಬಗ್ಗೆ ಹತ್ತಾರು ಭಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿವಿಧ ಸಭೆಗಳಲ್ಲಿ ಹೇಳಿದ್ದರೂ ಕೂಡಾ ರಸ್ತೆ ಬದಿ ವಾಲಿ ನಿಂತ ಆಕೇಶಿಯಾ ಮರಗಳನ್ನು ತೆರವು ಗೊಳಿಸದೇ ಜೀವ ಹಾನಿಗೆ ಕಾರಣವಾದ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಶಾಸಕರು ಪಟ್ಟಣದ ಜೆಸಿ ಆಸ್ಪತ್ರೆ ಶವಗಾರದಲ್ಲಿ ಮರಣ ಹೊಂದಿದ ಯುವಕನ ಅಂತಿಮ ದರ್ಶನ ಪಡೆದು ಸ್ಥಳದಿಂದಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ತರಾಟೆಗೆ ತೆಗೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು