12:00 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮರ ಬಿದ್ದು ಮೃತಪಟ್ಟ ಸಚಿನ್ ಮನೆಗೆ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಂಜುನಾಥ್ ಗೌಡ ಭೇಟಿ; ವೈಯಕ್ತಿಕ ಧನ ಸಹಾಯ

27/07/2024, 22:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಅಕೇಶಿಯ ಮರ ಬಿದ್ದು ಮೃತಪಟ್ಟ ಸಚಿನ್ ಮನೆಗೆ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ .ಆರ್. ಎಂ. ಮಂಜುನಾಥ್ ಗೌಡರು ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಜಿಲ್ಲಾಧಿಕಾರಿಗಳಿಗೆ ಫೋನ್ ಮೂಲಕ ಮಾತನಾಡಿ ತಕ್ಷಣ ಪರಿಹಾರದ ಚೆಕ್ ನೀಡಿವಂತೆ ಸೂಚಿಸಿದರು.

ನಂತರ ಬಡಕುಟುಂಬ ಜೊತೆಗೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಕೂಡ ಇಲ್ಲಿಗೆ ಬರ್ತಾರೆ ಎಂದು ಯುವಕನ ತಂದೆ ರಾಮಪ್ಪ ಅವರಿಗೆ ತಿಳಿಸಿ ವೈಯಕ್ತಿಕ ಧನ ಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಕೊಣಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಮಂಗಳಾ ಗೋಪಿ, ಹಾದಿಗಲ್ಲು ಗ್ರಾಮ ಉಪಾಧ್ಯಕ್ಷ ರವೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪರಮೇಶ್, ಕಾಂಗ್ರೆಸ್ ಪಕ್ಷದ ‌ಮುಖಂಡರು ಅಮೀರ್ ಹಂಜಾ, ಕುರುವಳ್ಳಿ ನಾಗರಾಜ್, ಚೇತುನ್ ಯಡೂರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು