2:02 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮರಳು ಸಮಸ್ಯೆ ನಿಮ್ಮ ಡಬಲ್ ಎಂಜಿನ್ ಸರಕಾರದ್ದು: ಶಾಸಕ ವೇದವ್ಯಾಸ ಕಾಮತ್ ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

06/11/2023, 15:48

ಮಂಗಳೂರು(reporterkarnataka.com):ಮರಳಿನ ಸಮಸ್ಯೆ ಕುರಿತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಾರವಾಗಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡಿದ ಸಚಿವರು, ಮಾನ್ಯ ಶಾಸಕರಾದ ವೇದವ್ಯಾಸ್ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ.
ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಠಿಯ ಒಂದೂ ಕೆಲಸ ಮಾಡಿಲ್ಲ. ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ದಿನೇಶ್ ಗುಂಡೂರಾವ್ ಟ್ವಿಟ್ ಮಾಡಿದ್ದಾರೆ.
ನಿಮ್ಮದೇ ಸರ್ಕಾರದ ಅವಧಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿತ್ತು. ಆದರೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕರಾಕ್ಕೇರಿದ ಬಳಿಕ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೊಸ ಡಯಾಲಿಸಿಸ್ ಯಂತ್ರಗಳ ಪೂರೈಕೆ ಮತ್ತು ನಿರ್ವಹಣೆಗಾಗಿ ಹೊಸ ಟೆಂಡರ್ ಕರೆಯಲಾಗಿದೆ.
ನಿಮ್ಮ ರಾಜಕೀಯ ಸೇಡಿನ ಆರೋಪದ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು