6:27 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಾರ್ಚ್ 10-15: ಅಳಪೆ ಶ್ರೀ ಮುಂಡಿತ್ತಾಯ ದೈವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನೇಮೋತ್ಸವವು

05/03/2024, 14:28

ಮಂಗಳೂರು(reporterkarnataka.com): ಅಳಪೆ ಕಣ್ಣೂರಿನಲ್ಲಿರುವ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮುಂಡಿತ್ತಾಯ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮಾರ್ಚ್ 10ರಿಂದ 15ರವರೆಗೆ ವಿಜೃಂಭಣೆಯಿಂದ ಜರುಗಲಿದೆ.

ಮುಂಡಿತ್ತಾಯ ದೈವಸ್ಥಾನದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾಹಿತಿ ನೀಡಿದರು.
ದೈವಸ್ಥಾನಕ್ಕೆ 850 ವರ್ಷಗಳ ಇತಿಹಾಸವಿದ್ದು, ಭಕ್ತರ ಸಹಕಾರದೊಂದಿಗೆ ಭಂಡಾರ ಮನೆ, ದೈವದ ಗುಡಿಯು ನಿರ್ಮಾಣಗೊಂಡಿದೆ. ಮಾ.13ರಂದು ಶ್ರೀ ಮುಂಡಿತ್ತಾಯ, ಮಹಿಷಂದಾಯ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಅಣ್ಣಪ್ಪ ಪಂಜುರ್ಲಿ, ಜಾನುನಾಯಕ, ಪಿಲಿಚಂಡಿ, ಕಲ್ಲುರ್ಟಿ ಕಲ್ಕುಡ ದೈವಗಳ ನೇಮೋತ್ಸವವು ಅಘೋರ ತಾಂತ್ರಿಕ್ ದೇರೆಬೈಲ್ ಬ್ರಹ್ಮಶ್ರೀ ವಿಠಲದಾಸ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು ಎಂದು ಅವರು ತಿಳಿಸಿದರು.
ಮಾ.10ರಂದು ಮಧ್ಯಾಹ್ನ 3 ಗಂಟೆಗೆ ಹಸಿರು ಹೊರೆಕಾಣಿಕೆ ಮೆರವಣಿಗೆ, ಉಗ್ರಾಣ ಮುಹೂರ್ತ ನಡೆಯಲಿದೆ. ಮಾ.11ರ ರಾತ್ರಿ 7 ಗಂಟೆಯಿಂದ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಸಂಗೀತ ಗಾನ ಸಂಭ್ರಮ, 12ರಂದು ರಾತ್ರಿ 8 ಗಂಟೆಯಿಂದ ವಿಠಲ ನಾಯಕ್ ಮತ್ತು ಬಳಗದಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ.
ಮಾ.15ರಂದು ಸಂಜೆ 6 ಗಂಟೆಯಿಂದ ಕಟೀಲು ಮೇಳದಿಂದ ತ್ರಿಜನ್ಮ ಮೋಕ್ಷ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಮಾ.16ರಿಂದ ವಾರ್ಷಿಕ ದೊಂಪದ ಬಲಿ ಜಾತ್ರೆ, ಮಾ.20ರಿಂದ 28ರವರೆಗೆ ವಾರ್ಷಿಕ ನೇಮೋತ್ಸವ ಜರುಗಲಿದೆ. ಪ್ರತಿನಿತ್ಯ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೈ ಬಡಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪೆರ್ಲ ರಾಮಕೃಷ್ಣ ನಾಯಕ್, ರಘುರಾಮ್ ಶೆಟ್ಟಿ, ಕಣ್ಣೂರು ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್, ಅಳಕೆ ಕಾರ್ಪೋರೇಟರ್ ರೂಪಶ್ರೀ ಪೂಜಾರಿ, ಕೋಟ್ಯಾನ್, ನಿಖಿತ್ ಕೊಟ್ಟಾರಿ
ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು