12:29 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮಾ.21ರಂದು ಸಾರಿಗೆ ನೌಕರರ ಮುಷ್ಕರ; 23 ಸಾವಿರ ಕೆಎಸ್ಸಾರ್ಟಿಸಿ ಬಸ್ ರಸ್ತೆಗೆ ಇಳಿಯೊಲ್ಲ; ಅನಂತ ಸುಬ್ಬರಾವ್

17/03/2023, 14:11

ಬೆಂಗಳೂರು(reporterkarnataka.com): ವೇತನ ಪರಿಷ್ಕರಣೆ ಸೇರಿದಂತೆ ಸಾರಿಗೆ ನೌಕರರ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾ. 21ರಂದು ಕರೆ ನೀಡಿರುವ ಸಾರಿಗೆ ಮುಷ್ಕರದಿಂದ ಹಿಂದೇ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಹೇಳಿದ್ದಾರೆ.
ಮಾ.21ಕ್ಕೆ ಮುಷ್ಕರ ಆರಂಭಗೊಳ್ಳುತ್ತದೆ. ಮುಖ್ಯಮಂತ್ರಿ ಅವರು ನೇರವಾಗಿ ನಮ್ಮ ಜೊತೆ ಸಭೆ ಮಾಡದೇ ಮೂಲವೇತನ ಶೇ.15ರಚ್ಡು ಹೆಚ್ಚಳ ಘೋಷಣೆ ಮಾಡಿದ್ದಾರೆ. ಸಿಎಂ ನಮ್ಮೊಂದಿಗೆ ಚರ್ಚೆಗೆ ಬರಬೇಕು. ಕೇವಲ ಒಂದು ಬೇಡಿಕೆ ಈಡೇರಿಸುವ ಆದೇಶ ಬಂದರೆ ನಮ್ಮ ಹೋರಾಟ ನಿಲ್ಲದು. ಈ ಹೋರಾಟಕ್ಕೆ ನಾಲ್ಕು ನಿಗಮಗಳ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಮಾ.21ರಿಂದ 23 ಸಾವಿರ ಕೆಎಸ್ಸಾರ್ಟಿಸಿ ಬಸ್‍ಗಳು ರಸ್ತೆಗೆ ಇಳಿಯಲ್ಲ ಎಂದರು.
ಸರಕಾರ ಏಕಪಕ್ಷೀಯವಾಗಿ ಮೂಲ ವೇತನದ ಶೇ15ರಷ್ಟು ಹೆಚ್ಚಳವನ್ನು ಘೋಷಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದಿದೆ. ಅಧಿಕೃತ ಆದೇಶವೇ ಬಂದಿಲ್ಲ. ಇನ್ನೂ ನೌಕರರ ಭತ್ಯೆ, ವಜಾಗೊಂಡವರ ಮರು ನೇಮಕ ಸೇರಿದಂತೆ ಹಲವು ಬೇಡಿಕೆಗಳು ಹಾಗೆಯೆ ಉಳಿದಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಬೇಡಿಕೆಗಳು ಈಡೇರಿಸುವವರೆಗೆ ಸಾರಿಗೆ ನೌಕರರ ಸಂಘವು ಮಾ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದೆ. ಜನರಿಗೆ ತೊಂದರೆ ಮಾಡುವ ಉದ್ದೇಶವಿಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು