12:25 PM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಮಾರ್ಚ್ 3: ಎಂಸಿಸಿ ಬ್ಯಾಂಕಿನ‌ ಬ್ರಹ್ಮಾವರ ಶಾಖೆ ಉದ್ಘಾಟನೆ; 17ನೇ ಹೊಸ ಶಾಖೆ

02/03/2024, 13:58

ಉಡುಪಿ(reporterkarnataka.com): ಎಂಸಿಸಿ ಬ್ಯಾಂಕಿನ‌ ಬ್ರಹ್ಮಾವರ ಶಾಖೆ ಉದ್ಘಾಟನಾ ಸಮಾರಂಭ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸಿನ ನೆಲ ಮಹಡಿಯಲ್ಲಿ ಮಾರ್ಚ್ 3ರಂದು ಬೆಳಗ್ಗೆ 11.15ಕ್ಕೆ ನಡೆಯಲಿದೆ.
ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟನೆ ನೆರವೇರಿಸುವರು. ಬ್ಯಾಂಕಿನ‌ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸುವರು. ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ ಧರ್ಮಗುರು ರೆ.ಫಾ. ಜಾನ್ ಫೆರ್ನಾಂಡಿಸ್ ಆಶೀರ್ವಚನ ನೀಡುವರು. ವಿಕಾರ್ ಜನರಲ್ ರೆ.ಫಾ. ಎಂ.ಸಿ. ಮಥಾಯಿ ಭದ್ರತಾ ಕೊಠಡಿ ಉದ್ಘಾಟಿಸುವರು. ಗೌರವ ಅತಿಥಿಗಳಾಗಿ ಉಡುಪಿ ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೆ.ಫಾ. ಡೆನ್ನಿಸ್ ಡೇಸಾ, ಉಡುಪಿ ಕೆಥೋಲಿಕ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರೆ. ಫಾ. ವಿನ್ಸೆಂಟ್ ಕ್ರಾಸ್ತಾ, ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಸುಪರಿಟೆಂಡೆಂಟ್ ಪಿ.ಎ. ಹೆಗ್ಡೆ, ಉಡುಪಿ ಜಿಲ್ಲೆ ಸಹಕಾರಿ ಸಂಘಗಳ ಉಪ ನಿಬಂಧಕ ಎಚ್.ಎನ್. ರಮೇಶ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಬಿ.ಆರ್. ಹಾಗೂ ಉಡುಪಿ ವಕ್ಫ್ ಬೋರ್ಡ್ ನಿಕಟಪೂರ್ವ ಜನಾಬ್ ಕೆ.ಪಿ.‌ ಇಬ್ರಾಹಿಂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು