11:22 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಸಮೀಪ ರಸ್ತೆ, ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

12/10/2022, 21:56

ಮಂಗಳೂರು(reporter Karnataka.com):ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಸಮೀಪ ರಸ್ತೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಕುರಿತು ಮಾತನಾಡಿದ ಶಾಸಕ ಕಾಮತ್, ಈ ಭಾಗದ ಜನರ ಬೇಡಿಕೆಯಂತೆ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲಿ ಕೆಲಸ ಪ್ರಾರಂಭಿಸಲು ಸೂಚಿಸಿದ್ದೇನೆ. ಸದ್ಯ ಕಿರಿದಾದ ರಸ್ತೆಯಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಹಾಗಾಗಿ ರಸ್ತೆ ಅಗಲೀಕರಣಗೊಳಿಸಿ ತಡೆಗೋಡೆ ನಿರ್ಮಿಸುವ ಯೋಜನೆ ಇದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಬಿಜೆಪಿ ಮುಖಂಡರಾದ ಜಗದೀಶ್ ಶೆಣೈ, ಕೃಷ್ಣ ಎಸ್.ಆರ್, ಜನಾರ್ದನ್ ದೇವಾಡಿಗ, ಜಗನ್ನಾಥ ದೊಡ್ಡಮನೆ, ಸರಳ ಕುಲಾಲ್, ಅರುಣ್ ಶೆಟ್ಟಿ, ಪುರುಷೋತ್ತಮ ಕೋಟ್ಯಾನ್, ಕಿರಣ್ ದೇವಾಡಿಗ ಮರೋಳಿ, ಪ್ರಶಾಂತ್ ಮರೋಳಿ, ಅನಿತಾ ಅರುಣ್, ಮಾಲತಿ ಅರುಣ್ ಶೆಟ್ಟಿ, ರಾಜೇಶ್, ಪ್ರಮೀಳಾ ಶೆಟ್ಟಿ, ಲೀಲಾ ಸತೀಶ್, ರಾಘವೇಂದ್ರ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು