2:24 PM Thursday15 - May 2025
ಬ್ರೇಕಿಂಗ್ ನ್ಯೂಸ್
ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.…

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ ಮಾಲಿನ್ಯ ವಿರುದ್ಧ ಪ್ರತಿಭಟನೆ: ಸ್ಥಳಕ್ಕೆ ಆಗಮಿಸಿ ಹಕ್ಕೊತ್ತಾಯ ಆಲಿಸದ ಕಂಪನಿ ಎಂಡಿ, ಜಿಎಂ!!

24/01/2023, 19:45

ಸುರತ್ಕಲ್(reporterkarnataka.com): ಸಾರ್ವಜನಿಕ ರಂಗದ ಪ್ರತಿಷ್ಟಿತ ಕಂಪೆನಿಯಾದ ಎಮ್ಆರ್ ಪಿಎಲ್ ನಿಂದ ಮಾಲಿನ್ಯ ಉಂಟಾಗುತ್ತಿದೆ ಎಂದು ಆರೋಪಿಸಿ ಹಾಗೂ ಕೆಲವು ಹಕ್ಕೊತ್ತಾಯಗಳಿಗೆ ಆಗ್ರಹಿಸಿ ವೃದ್ಧರು, ಮಹಿಳೆಯರು ಸೇರಿದಂತೆ ಭಾರಿ ಸಂಖ್ಯೆಯಲ್ಲಿ ನಾಗರಿಕರು ಕಂಪನಿಯ ಎದುರುಗಡೆ ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಕಂಪನಿಯ ಎಂಡಿ ವೆಂಕಟೇಶ್ ಅವರಾಗಲಿ, ಜನರಲ್ ಮೆನೇಜರ್ ಅವರಾಗಲಿ ಭೇಟಿ ನೀಡದೆ ವೆಲ್ಪೇರ್ ಆಫೀಸರ್ ಅವರನ್ನು ಕಳುಹಿಸಿದ ಘಟನೆ ಮಂಗಳವಾರ ನಡೆದಿದೆ.

ಪರಿಸರ, ಉದ್ಯೋಗದ ವಿಷಯದಲ್ಲಿ ಖಾಸಗಿ ಕಾರ್ಪೊರೇಟ್ ಕಂಪೆನಿಗಳಿಗಿಂತಲೂ ಕೆಟ್ಟದಾಗಿ ವರ್ತಿಸುತ್ತಿದೆ. ಹಸಿರು ವಲಯ ನಿರ್ಮಾಣದ ಕಡ್ಡಾಯ ನಿಯಮವನ್ನೂ ಉಲ್ಲಂಘಿಸಿದೆ. ಜೋಕಟ್ಟೆ, ಕಳವಾರು, ಕೆಂಜಾರು ಗ್ರಾಮಗಳ ಜನವಸತಿ ಪ್ರದೇಶದಲ್ಲಿ ಮಾರಣಾಂತಿಕ ಪೆಟ್ ಕೋಕ್ ಮಾಲಿನ್ಯ ತಡೆಯಲು 27 ಎಕರೆ ಹಸಿರು ವಲಯ ನಿರ್ಮಿಸುವ ಸರಕಾರಿ ಆದೇಶಂತೆ ಭೂಮಿ ಗುರುತಿಸಿದರೂ ಕಂಪೆನಿ ಕುಂಟು ನೆಪಗಳನ್ನು ಮುಂದಿಟ್ಟು ಕಾಲಹರಣ ಮಾಡುತ್ತಿದೆ. ಇದರಿಂದ ಜೋಕಟ್ಟೆ, ಕಳವಾರು ಗ್ರಾಮಗಳು ರೋಗಗ್ರಸ್ತಗೊಂಡಿವೆ. ಕಂಪೆನಿಯ ಮಾಲಿನ್ಯದಿಂದ ಪಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ ನಡೆದಿದೆ. ಸಮುದ್ರದಲ್ಲಿ ಮೀನುಗಳ ಸಂತತಿ ಕಡಿಮೆಯಾಗುತ್ತಿದೆ. ಕಂಪೆನಿಯ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರನ್ನು ಮುಲಾಜಿಲ್ಲದೆ ಹೊರಗಿಡಲಾಗುತ್ತಿದೆ ಎಂದು ಆರೋಪಿಸಿ ಡಿವೈಎಫ್ ಐ ರಾಜ್ಯ ಮುಖಂಡ ಮುನೀರ್ ಕಾಟಿಪಳ್ಳ ನೇತೃತ್ವದಲ್ಲಿ ಧರಣಿ ಪ್ರತಿಭಟನೆಯನ್ನು ಮಂಗಳವಾರ ಕಂಪನಿಯ ಕಾರ್ಗೋ ಗೇಟ್ ಬಳಿ ನಡೆಸಲಾಯಿತು. ಪ್ರತಿಭಟನೆಯ ಕಾವು ಏರುತ್ತಿದ್ದಂತೆ ಕಂಪನಿಯು ವೆಲ್ಪೇರ್ ಆಫೀಸರ್ ಅವರನ್ನು ಸ್ಥಳಕ್ಕೆ ಕಳುಹಿಸಿ ಮನವಿ ಸ್ವೀಕರಿಸುವ ಕಾಟಾಚಾರವನ್ನು ಮುಗಿಸಲಾಯಿತು. ಕಂಪನಿಯ ಆಡಳಿತ ನಿರ್ದೇಶಕರಾದ ವೆಂಕಟೇಶ್ ಅವರಾಗಲಿ, ಸ್ಥಳೀಯರೇ ಆದ ಕಂಪನಿಯ ಜನರಲ್ ಮೆನೇಜರ್ ಅವರಾಗಲಿ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಆಗಮಿಸಿ ವೃದ್ಧರು, ಹೆಂಗಸರು, ಅನಾರೋಗ್ಯ ಪೀಡಿತರು ಸೇರಿದಂತೆ ಪ್ರತಿಭಟನಾಕಾರರ ಸಮಸ್ಯೆ ಆಲಿಸುವ ವ್ಯವಧಾನ ತೋರಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಮಾಜಿ ಉಪಮೇಯರ್ ಗಳಾದ ಮುಹಮ್ಮದ್ ಕುಂಜತ್ತಬೈಲ್, ಪುರುಷೋತ್ತಮ ಚಿತ್ರಾಪುರ, ಸಾಮಾಜಿಕ ಮುಂದಾಳುಗಳಾದ ಮಂಜುಳಾ ನಾಯಕ್, ಸುಂದರ ಶೆಟ್ಟಿ, ನಾಗರಿಕ ಹೋರಾಟ ಸಮಿತಿಯ ಅಬೂಬಕ್ಕರ್ ಬಾವಾ, ಸಿಲ್ವಿಯಾ ಜೋಕಟ್ಟೆ, ಶೆರೀಫ್ ನಿರ್ಮುಂಜೆ, ಶೇಖರ ನಿರ್ಮುಂಜೆ, ರಾಜು ಜೋಕಟ್ಟೆ, ಚಂದ್ರಶೇಖರ ಜೋಕಟ್ಟೆ, ಸೀತಾರಾಮ ಆಚಾರ್ಯ, ಇಕ್ಬಾಲ್ ಜೋಕಟ್ಟೆ, ಯಮುನಾ ಕೆಂಜಾರು, ಡಿವೈಎಫ್ಐ ಮುಖಂಡರಾದ ಶ್ರೀನಾಥ್ ಕುಲಾಲ್, ಬಿ ಕೆ ಮಕ್ಸೂದ್, ಪ್ರಮೀಳಾ, ಸಲೀಂ ಶ್ಯಾಡೋ, ಸಮರ್ಥ್ ಭಟ್ ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು. ಆರಂಭದಲ್ಲಿ ಎಚ್ ಪಿಸಿಎಲ್ ಪ್ರಧಾನ ದ್ವಾರದಿಂದ ಎಮ್ಆರ್ ಪಿಎಲ್ ಪ್ರಧಾನ ದ್ವಾರದವರಗೆ ಬೃಹತ್ ಮೆರವಣಿಗೆ ನಡೆಯಿತು‌.

ಇತ್ತೀಚಿನ ಸುದ್ದಿ

ಜಾಹೀರಾತು