10:39 PM Sunday6 - July 2025
ಬ್ರೇಕಿಂಗ್ ನ್ಯೂಸ್
ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮರವೂರು ಹೊಸ ಸೇತುವೆ ಮುಂದಿನ ಫೆಬ್ರವರಿಯೊಳಗೆ ಪೂರ್ಣ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ 

16/06/2021, 09:55

ಮಂಗಳೂರು (reporterkarnataka news): ಮರವೂರು ನೂತನ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾತಿಯಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.. ಸೇತುವೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಮುಂಬರುವ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ರಾಷ್ಟ್ರೀಯ ಹೆದ್ದಾರಿ-67ರಲ್ಲಿರುವ ಮರವೂರು ಸೇತುವೆಯ ಪಿಲ್ಲರ್ 8 ಜೂನ್ 14 ರ ರಾತ್ರಿಯ ಸಮಯದಲ್ಲಿ ಕುಸಿದ ಹಿನ್ನೆಲೆ ಸೇತುವೆಯಲ್ಲಿ ಬಿರುಕು ಕಂಡಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸೇತುವೆಯ ಮೇಲೆ ವಾಹನ ಸಂಚಾರ ಯೋಗ್ಯವಲ್ಲದ ಕಾರಣ ಸ್ಥಗಿತಗೊಳಿಸಲಾಗಿದೆ ಎಂದರು.

ಈ  ಸೇತುವೆಯ ಮೇಲೆ ಹಾದು ಹೋಗುವ ರಸ್ತೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಈ ಸೇತುವೆಯ ಪುನರ್ ನಿರ್ಮಾಣ ಮಾಡಬೇಕೆ ಅಥವಾ ದುರಸ್ತಿ ಕೈಗೊಳ್ಳಬೇಕೆ ಎನ್ನುವುದಕ್ಕೆ ತಜ್ಞರನ್ನೊಳಗೊಂಡ ಸಮಿತಿಯು ಪರಿಶೀಲಿಸಿ ಇನ್ನೆರೆಡು ದಿನದೊಳಗೆ ವರದಿ ನೀಡಲಿದೆ. ವರದಿಯನ್ನಾಧರಿಸಿ ದುರಸ್ತಿ ಅಥವಾ ಪುನರ್ ನಿರ್ಮಾಣದ ಬಗ್ಗೆ ಅಗತ್ಯವಿರುವ ಅನುದಾನವನ್ನು   ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ನಾಲ್ಕು ಪಥದ ರಸ್ತೆಯ ಟೆಂಡರ್‍ನಲ್ಲಿ ಹಳೆ ಸೇತುವೆಯನ್ನು ದುರಸ್ಥಿ ಪಡಿಸಲು ಯೋಜನೆಯನ್ನು ರೂಪಿಸಲಾಯಿತು.  ಸೇತುವೆಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸೇತುವೆ ತಪಾಸಣಾ ತಂಡ ಪ್ಲಾನಿಂಗ್ ಆ್ಯಂಡ್ ರೋಡ್ ಆಸ್ಸೆಟ್ ಮ್ಯಾನೇಜ್‍ಮೆಂಟ್ ಸೆಂಟರ್ ವತಿಯಿಂದ ಈಗಾಗಲೇ ಪರಿಶೀಲಿಸಿರುತ್ತಾರೆ. ಹಳೇಯ ಸೇತುವೆ ದುರಸ್ಥಿಗೆ 3 ತಿಂಗಳುಗಳ ಕಾಲ ವಾಹನ ಸಂಚಾರ ಸ್ಥಗಿತಗೊಳಿಸಬೇಕಾಗಿರುವುದರಿಂದ ಹೊಸ ಸೇತುವೆ ನಿರ್ಮಾಣಗೊಂಡ ನಂತರವೇ ಹಳೇ ಸೇತುವೆಯ ದುರಸ್ತಿ ಕಾರ್ಯಕೈಗೊಳ್ಳಲು ಉದ್ದೇಶಿಸಲಾಗಿತ್ತು, ಈಗ ತಜ್ಞರ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸೇತುವೆ ಕುಸಿದು ವಾಹನ ಸಂಚಾರ ನಿರ್ಬಂಧಿಸಿದ ಹಿನ್ನೆಲೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ಮಾರ್ಗವಾಗಿ ಉಡುಪಿ ಕಡೆಯಿಂದ ಮುಲ್ಕಿ – ಮೂರುಕಾವೇರಿ-ಕಟೀಲು ಮುಖಾಂತರ, ಬಜ್ಪೆಗೆ ಹಾಗೂ ಮಂಗಳೂರು ಕಡೆಯಿಂದ  ಮರವೂರು ದ್ವಾರದಿಂದ ಪೊರ್ಕೋಡಿ – ಜೋಕಟ್ಟೆ – ಬೈಕಂಪಾಡಿ ರಸ್ತೆ ಮತ್ತು ಕೈಕಂಬ – ಅದ್ಯಪಾಡಿ ರಸ್ತೆ ಅಥವಾ ಕೈಕಂಬ – ಬಜಪೆ ರಸ್ತೆ ಮಾರ್ಗವಾಗಿ, ಸುರತ್ಕಲ್  – ಮಂಗಳಪೇಟೆ -ಬಜಪೆ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು