12:42 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮರವೂರು ಸೇತುವೆ ಹಾನಿಗೆ ಮರಳು ಮಾಫಿಯಾ ಕಾರಣ: ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪ

16/06/2021, 09:47

ಮಂಗಳೂರು(reporterkarnataka news): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮರವೂರು ಸೇತುವೆ ಹಾನಿಗೊಳಗಾಗಲು ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಮರಳು ಮಾಫಿಯಾವೇ ಪ್ರಮುಖ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ.

ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು ಅವರು ಹೇಳಿದರು.
ಪರ್ಯಾಯ ಸೇತುವೆ ನಿರ್ಮಾಣಕ್ಕೆ ಮುಂದಾಗುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ವಹಿಸಬೇಕಿತ್ತು. ಹಿಂದೆಲ್ಲಾ ಜಿಲ್ಲಾಧಿಕಾರಿಗಳು ತಾಲೂಕು ಕೇಂದ್ರಗಳ ಅತಿಥಿ ಗೃಹಗಳಲ್ಲಿ ಶಿಬಿರ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಳ್ಳುತ್ತಿದ್ದರು. ಅಂತಹ ವ್ಯವಸ್ಥೆ ಈಗ ಇಲ್ಲ ಎಂದು ಹೇಳಿದ ಅಭಯಚಂದ್ರ ಜೈನ್, ಇದೀಗ ಮರವೂರು ಸೇತುವೆಯ ಜತೆಗೆ ಬಹುಗ್ರಾಮ ಕುಡಿಯುವ ನೀರಿಗಾಗಿ ಹಿಂದಿನ ಶಾಸಕರಾದ ವಿಜಯ ಕುಮಾರ್ ಶೆಟ್ಟಿಯವರ ಮುತುವರ್ಜಿಯಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟಿಗೂ ಅಪಾಯವನ್ನು ತಂದೊಡ್ಡಿದೆ. ಜತೆಗೆ ಕೊಂಕಣ ರೈಲ್ವೆಯ ಸೇತುವೆಯೂ ಇಲ್ಲಿ ಹಾದು ಹೋಗುತ್ತಿದ್ದು, ಅದಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜಕಾರಣಿಗಳ ಕೃಪಕಟಾಕ್ಷದಡಿಯಲ್ಲಿ ನಡೆಯುವ ಮರುಳು ಮಾಫಿಯಾದಿಂದ ಇಂತಹ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಣಿಗಾರಿಕೆ ಇಲಾಖೆಯ ಭ್ರಷ್ಟ ಅಧಿಕಾರಿಗಳೂ ಇದಕ್ಕೆ ಕಾರಣ. ನಾನು ಶಾಸಕನಾಗಿದ್ದಾಗ ಇದಕ್ಕೆ ಅವಕಾಶ ನೀಡಿರಲಿಲ್ಲ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು