10:41 AM Sunday15 - November 2026
ಬ್ರೇಕಿಂಗ್ ನ್ಯೂಸ್
ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000…

ಇತ್ತೀಚಿನ ಸುದ್ದಿ

ಮರವೂರು ಸೇತುವೆ ಹಾನಿಗೆ ಮರಳು ಮಾಫಿಯಾ ಕಾರಣ: ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪ

16/06/2021, 09:47

ಮಂಗಳೂರು(reporterkarnataka news): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮರವೂರು ಸೇತುವೆ ಹಾನಿಗೊಳಗಾಗಲು ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಮರಳು ಮಾಫಿಯಾವೇ ಪ್ರಮುಖ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ.

ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು ಅವರು ಹೇಳಿದರು.
ಪರ್ಯಾಯ ಸೇತುವೆ ನಿರ್ಮಾಣಕ್ಕೆ ಮುಂದಾಗುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ವಹಿಸಬೇಕಿತ್ತು. ಹಿಂದೆಲ್ಲಾ ಜಿಲ್ಲಾಧಿಕಾರಿಗಳು ತಾಲೂಕು ಕೇಂದ್ರಗಳ ಅತಿಥಿ ಗೃಹಗಳಲ್ಲಿ ಶಿಬಿರ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಳ್ಳುತ್ತಿದ್ದರು. ಅಂತಹ ವ್ಯವಸ್ಥೆ ಈಗ ಇಲ್ಲ ಎಂದು ಹೇಳಿದ ಅಭಯಚಂದ್ರ ಜೈನ್, ಇದೀಗ ಮರವೂರು ಸೇತುವೆಯ ಜತೆಗೆ ಬಹುಗ್ರಾಮ ಕುಡಿಯುವ ನೀರಿಗಾಗಿ ಹಿಂದಿನ ಶಾಸಕರಾದ ವಿಜಯ ಕುಮಾರ್ ಶೆಟ್ಟಿಯವರ ಮುತುವರ್ಜಿಯಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟಿಗೂ ಅಪಾಯವನ್ನು ತಂದೊಡ್ಡಿದೆ. ಜತೆಗೆ ಕೊಂಕಣ ರೈಲ್ವೆಯ ಸೇತುವೆಯೂ ಇಲ್ಲಿ ಹಾದು ಹೋಗುತ್ತಿದ್ದು, ಅದಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜಕಾರಣಿಗಳ ಕೃಪಕಟಾಕ್ಷದಡಿಯಲ್ಲಿ ನಡೆಯುವ ಮರುಳು ಮಾಫಿಯಾದಿಂದ ಇಂತಹ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಣಿಗಾರಿಕೆ ಇಲಾಖೆಯ ಭ್ರಷ್ಟ ಅಧಿಕಾರಿಗಳೂ ಇದಕ್ಕೆ ಕಾರಣ. ನಾನು ಶಾಸಕನಾಗಿದ್ದಾಗ ಇದಕ್ಕೆ ಅವಕಾಶ ನೀಡಿರಲಿಲ್ಲ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು