7:32 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಸ್ಕಿ: ಕೊರೊನಾ ಸೋಂಕಿತ ಬಡವರಿಗೆ ಆಸರೆಯಾದ ಸರಕಾರಿ ವಸತಿ ಶಾಲೆ, ಹಾಸ್ಟೆಲ್ ಗಳು!

26/05/2021, 07:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@ gmail.com

ಕೊರೊನಾ ಎಂಬ ಮಹಾಮಾರಿ ವೈರಸ್ ಇಡೀ ದೇಶವನ್ನೇ ಹಾಳು ಮಾಡಲು ನಿಂತಿದೆ. ಸಾವಿರಾರು ಜನರ ಜೀವ ಬಲಿ ಪಡೆದುಕೊಂಡು ಲಕ್ಷಾಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಅಲ್ಲದೆ ಕೋವಿಡ್ ನಿಂದ ಬಳಲುತ್ತಿರುವವರು ಪ್ರತಿನಿತ್ಯ ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ಮಸ್ಕಿ ತಾಲೂಕಿನಲ್ಲಿ ನಿರ್ಮಾಣವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರಿಗೆ ಸರಕಾರಿ ವಸತಿ ಶಾಲೆಗಳೇ ಆಸರೆಯಾಗಿದೆ.

ಕೊರೊನಾ ವೈರಸ್ ನಿಂದ ಇಡಿ ದೇಶವೇ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಬಡವರ ಕುಟುಂಬದ ವಿದ್ಯಾಭ್ಯಾಸಕ್ಕಾಗಿ ಇರುವ ವಸತಿ ಶಾಲೆಗಳು,  ಹಾಸ್ಟೆಲ್ ಗಳು, ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ಸೋಂಕಿತರಿಗೆ ವರದಾನವಾಗಿ ಪರಿಣಮಿಸಿದೆ. ಇದರಿಂದ ಸರಕಾರಕ್ಕೆ ಒಂದು ರೀತಿಯಲ್ಲಿ ಉಪಯೋಗವಾಗಿದೆ. ಕೋವಿಡ್ 19 ಮೊದಲ ಅಲೆಗೆ ರಾಜ್ಯದಲ್ಲಿ ಬಹುತೇಕ ಸರಕಾರಿ ವಸತಿ ನಿಲಯಗಳು ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಗುರುತಿಸಿ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವಂತ ಸಾರ್ವಜನಿಕರಿಗೆ ಕೋವಿಡ್ ಕೇಂದ್ರಗಳನ್ನಾಗಿ ಮಾಡಿತ್ತು. ಅಲ್ಲೇ  15 ದಿನ ಕ್ವಾರಂಟೈನ್ ವ್ಯವಸ್ಥೆ ಮಾಡಿತ್ತು. ಇದೀಗ ಬಡ ಜನರ ಜೀವ ಉಳಿಸಲು ಸರಕಾರಿ ವಸತಿ ಶಾಲೆಗಳು ಮುಂದಾಗಿವೆ ಎನ್ನುವುದಕ್ಕೆ ಮಸ್ಕಿ ಮುರಾರ್ಜಿ ವಸತಿ ಶಾಲೆಗಳೇ ಸಾಕ್ಷಿ. 

ಇತ್ತೀಚಿನ ಸುದ್ದಿ

ಜಾಹೀರಾತು