8:48 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಮಸ್ಕಿ: ಮಕ್ಕಳ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಗ್ರಾಮೀಣ ಭಾಷಾ ಕಮ್ಮಟ

31/08/2021, 20:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಇಂದಿನ ಆಧುನಿಕ ಶಿಕ್ಷಣದಿಂದ ಇಸ್ತ್ರೀ ಮಾಡಿದ ಭಾಷೆಯತ್ತ ಹೊರಳುತ್ತಿರುವ ಸಾಹಿತ್ಯ ಕೃಷಿಯನ್ನು ನೆಲದ ಭಾಷೆಯತ್ತ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಗ್ರಾಮೀಣ ಭಾಷಾ ಕಮ್ಮಟ ಅತಿ ಉಪಯುಕ್ತ ಎಂದು ಅಮರೇಶ ನುಗಡೋಣಿ ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಗ್ರಾಮೀಣ ಭಾಷಾ ಕಮ್ಮಟ ಆಯೋಜಿಸಿರುವ ಮಕ್ಕಳ ಸಾಹಿತ್ಯ ಪರಿಷತ್ ಮಸ್ಕಿ ಘಟಕದ ರವಿಚಂದ್ರ ಅವರ ಕಾರ್ಯ ಶ್ಲಾಘನೀಯ ಎಂದರು.

ಕನ್ನಡ ಕಾಯಕ ವರ್ಷಾಚರಣೆ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಮಸ್ಕಿ ಘಟಕ  ಮಸ್ಕಿ ಪಟ್ಟಣದಲ್ಲಿ ವಿದ್ಯಾರ್ಥಿಗಳಿಗಾಗಿ ಗ್ರಾಮೀಣ ಭಾಷ ಕಮ್ಮಟವನ್ನು ಎರಡು ದಿನಗಳ ಕಾಲ ಹಮ್ಮಿಕೊಂಡಿದೆ. ವಿಶೇಷ ಗೋಷ್ಠಿಗಳನ್ನು ಏರ್ಪಡಿಸಿದೆ.

ಮಸ್ಕಿ ಘಟಕದ ಅಧ್ಯಕ್ಷ ರವಿಚಂದ್ರ ಅವರು ಪ್ರಾಸ್ತಾವಿಕ ಮಾತನಾಡಿ, ನೆಲಮೂಲದ ಗ್ರಾಮೀಣ ಸಂವೇದನೆಗಳನ್ನು ಹಿಡಿದಿಡಲು, ಗ್ರಾಮೀಣ ಭಾಷೆಯ ವೈವಿಧ್ಯತೆ ಮತ್ತು ಸೊಗಡನ್ನು ಉಳಿಸಲು, ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಭಾಷೆಯ ಕುರಿತು ಅಭಿಮಾನ ಮೂಡಿಸಲು, ವಿದ್ಯಾರ್ಥಿಗಳು ತಮ್ಮ ಸಾಹಿತ್ಯಕೃಷಿಯಲ್ಲಿ ಗ್ರಾಮೀಣ ಭಾಷೆಯನ್ನು ಬಳಸುವಂತೆ ಪ್ರೇರೇಪಿಸಲು ಈ ಗ್ರಾಮೀಣ ಭಾಷಿಕ ಮಟ್ಟವನ್ನು ಮಸ್ಕಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಾನಪದ ಕಲಾವಿದ ಹುಚ್ಚಪ್ಪ ಮದ್ನಾಳ ಡೊಳ್ಳಿನ ಪದಗಳನ್ನು ಹಾಡಿದರು. ಮಲ್ಕಾಪುರ ದ ವಿದ್ಯಾರ್ಥಿಗಳು ಜಾನಪದ ಗೀತೆಗಳನ್ನು ಹಾಡಿದರು. ವೀರೇಶ್ ಸೌದ್ರಿಯವರು ಅತಿಥಿ ನುಡಿಗಳನ್ನು ಮಾತನಾಡಿದರು.

ಮಾಹಂತೇಶ್ ಮಸ್ಕಿ ಅಧ್ಯಕ್ಷತೆ ವಹಿಸಿದ್ದು ಮಕ್ಕಳ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯವನ್ನು ಶ್ಲಾಘಿಸಿದರು. ಸಾಹಿತಿ ಗುಂಡುರಾವ್ ದೇಸಾಯಿ, ಆದಪ್ಪ ಹೆಂಬ, ಪಂಪನ ಗೌಡ ಪಾಟೀಲ್, ಘನಮಠದಯ್ಯ ಶಂಕರಗೌಡ ಪಾಟೀಲ್, ಬಾಲಸ್ವಾಮಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಜುನಾಥ್ ಸ್ವಾಮಿ ಸ್ವಾಗತಿಸಿದರು. ಮಂಜುನಾಥ್ ಹಾಲಾಪುರ ನಿರೂಪಿಸಿದರು, ಸಿದ್ದಾರ್ಥ ಪಾಟೀಲ್ ವಂದಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು