ಇತ್ತೀಚಿನ ಸುದ್ದಿ
ಮಸ್ಕಿ ಪುರಸಭೆ, ತುರ್ವಿಹಾಳ ಹಾಗೂ ಬಳಗಾನೂರು ಪಟ್ಟಣ ಪಂಚಾಯತಿ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿ ಸಿದ್ಧ
15/12/2021, 18:45
ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ
ಅಂತರಗಂಗೆ ರಾಯಚೂರು
info.reporterkarnataka@gmail.com
ಮಸ್ಕಿ ಪುರಸಭೆ, ತುರ್ವಿಹಾಳ ಹಾಗೂ ಬಳಗಾನೂರು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ ನಡೆಸಲಾಗಿದ್ದು, ಬಿ ಫಾರಂ ವಿತರಿಸುವ ಕಾರ್ಯ ನಡೆದಿದೆ ಎಂದು ಬಿಜೆಪಿ ಬಳ್ಳಾರಿ ವಿಭಾಗದ ಪ್ರಭಾರಿ ಸಿದ್ದೇಶ ಯಾದವ್ ಹೇಳಿದರು.
ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಬಿಜೆಪಿ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಯಾಗಿದೆ. ಮಸ್ಕಿ ನಗರದ ಸೌಂದರ್ಯ ಹಾಗೂ ಸ್ಚಚ್ಛತೆಗೆ ಅಧ್ಯತೆ ನೀಡಲಾಗುವುದು. ಅಭ್ಯರ್ಥಿಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ಪ್ರತಿ ವಾರ್ಡ್ ನಲ್ಲಿ ಜನರ ಅಭಿಪ್ರಾಯ ಪಡೆದು ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿ ಎಲ್ಲರೂ ಕೆಲಸ ಮಾಡಬೇಕು ಎಂದರು.
ಹಿಂದಿನ ಐದು ವರ್ಷದ ಅವದಿಯಲ್ಲಿ ಸಾಕಷ್ಟು ಕೆಲಸಗಳು ಆಗಿವೆ ಎಂದರು.
ಈ ಭಾರಿ ರಾಜ್ಯ ಸರ್ಕಾರದಿಂದ ಹೆಚ್ಚು ಅನುದಾನ ಬಳಸಿಕೊಂಡು ಅಭಿವೃದ್ಧಿ ಗೆ ಒತ್ತು ಕೊಡಲಾಗುವುದು.
ಪ್ರತಿ ವಾರ್ಡ್ ನಿಂದ ಆಕಾಂಕ್ಷೆ ಗಳ ಸಂಖ್ಯೆ ಹೆಚ್ಚಿದೆ.ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ಎಲ್ಲ ವಾರ್ಡ್ ಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಪ್ರತಾಪ್ ಗೌಡ ಪಾಟೀಲ್ ಹಾಗೂ ಬಳ್ಳಾರಿ ವಿಭಾಗೀಯ ಪ್ರಭಾರಿಗಳಾದ ಸಿದ್ದೇಶ್ ಯಾದವ್, ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಹಳ್ಳಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ, ಜಿಲ್ಲಾ ಕಾರ್ಯದರ್ಶಿಗಳಾದ ಶಾರದಾ ರಾಠೋಡ್, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಶರಣಬಸವ ಉಮಲೂಟಿ, ಬಿಜೆಪಿ ಹಿರಿಯ ಮುಖಂಡರಾದ ಮಲ್ಲಪ್ಪ ಅಂಕುಶದೊಡ್ಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ, ಮಲ್ಲಿಕಾರ್ಜುನ ಯಾದವ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.














