11:48 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರಮಟ್ಟದ ಓಟಗಾರ್ತಿ, ಚಿನ್ನದ ಪದಕ ವಿಜೇತೆ ಕಮಲಾಕ್ಷಿ, ತರಬೇತುದಾರ ಲಕ್ಷ್ಮಣ್ ಗೆ ಸನ್ಮಾನ

17/01/2022, 16:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಪ್ರತಾಪ್ ಗೌಡ ಪಾಟೀಲ್ ಫೌಂಡೇಷನ್ ವತಿಯಿಂದ ರಾಷ್ಟ್ರಮಟ್ಟದ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದ ಮಸ್ಕಿಯ ತೀರ್ಥಬಾವಿ ಗ್ರಾಮದ ಬಡ ಕೂಲಿ ಕಾರ್ಮಿಕನ ಮಗಳಾದ ಕಮಲಾಕ್ಷಿ ಅವರಿಗೆ ಸನ್ಮಾನಿಸಲಾಯಿತು.

ಅದೇ ರೀತಿ ಬಾಲಕಿಗೆ ತರಬೇತಿ  ನೀಡಿದ ತರಬೇತುದಾರ ಲಕ್ಷ್ಮಣ್ ಅವರಿಗೂ ಕೂಡ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಫೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ್ ಅವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವಂತಹ ಕೆಲಸ ನಾವು ಸದಾ ಮಾಡುತ್ತೇವೆ. ನಿಮ್ಮೊಂದಿಗೆ ನಾವಿದ್ದೇವೆ. ಅದೇ ರೀತಿ ಮುಂದಿನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದು ನಮ್ಮ ತಾಲ್ಲೂಕಿನ ಹೆಸರನ್ನು ಇನ್ನೂ ಎತ್ತರಕ್ಕೆ ಕೊಂಡೊಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರುಗಳಾದ ಮಲ್ಲಿಕಾರ್ಜುನ್ 
ಬ್ಯಾಳಿ, ಮೌನೇಶ್ ನಾಯಕ, ಶರಣಯ್ಯ ಸೊಪ್ಪಿಮಠ, ಚೇತನ್ ಪಾಟೀಲ್, ಬಸವರಾಜ್ ಪಾಟೀಲ, ಡೋಣಮರಡಿ, ದುರ್ಗಾಪ್ರಸಾದ ತೋರಣದಿನ್ನಿ, ಶಶಿಧರ ಹಿರೇಮಠ, ಶಿವರಾಜ ಹರಸೂರ, ಸಂತೋಷ್ ಅಮರೇಶ್ ಸಾಲಿಮಠ, ಶರಣೇಗೌಡ, ಪೊಲೀಸ್ ಪಾಟೀಲ್ಪಾ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು