ಇತ್ತೀಚಿನ ಸುದ್ದಿ
ಮಸ್ಕಿ: ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ; ಆಸಕ್ತರು ಇಂದೇ ನೋಂದಾಯಿಸಿಕೊಳ್ಳಿ
30/06/2024, 13:35
ರಾಯಚೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಮಸ್ಕಿ ತಾಲೂಕು ಘಟಕ ವತಿಯಿಂದ ಪಿಯುಸಿ ಮತ್ತು ಸಿಇಟಿ ಪರೀಕ್ಷೆಯಲ್ಲಿ ಶೇ. 90 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಿದೆ.
ಜಂಗಮ ಸಮಾಜದ ವಿದ್ಯಾರ್ಥಿಗಳು ಹಾಗೂ ಇತರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಈ ಪುರಸ್ಕಾರ ಲಭ್ಯವಾಗಲಿದೆ. ಆಸಕ್ತರು ಪತ್ರಕರ್ತರ ಧ್ವನಿ ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ (ಮೊಬೈಲ್: 9880174902)
ಅವರಲ್ಲಿ ತಮ್ಮ ಹೆಸರು ನೋಂದಾಯಿಸಬೇಕು.
ಪ್ರತಿಭಾ ಪುರಸ್ಕಾರ ಮಸ್ಕಿ ಪಟ್ಟಣದಲ್ಲಿ ಮಾಡಲಾಗುವುದು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ, ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ, ಸಮಾಜ ಸೇವಕಿ ಅನು ಅಕ್ಕ,ಪತ್ರಕರ್ತ ಎಸ್. ಎಸ್. ಪಾಟೀಲ್, ಸಿನಿಮಾ ನಟರು, ಹಿರಿಯ ಸಾಹಿತಿಗಳು ಭಾಗವಹಿಸಲಿದ್ದಾರೆ.