4:04 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮಸ್ಕಿ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಶಾಸಕ ಬಸನಗೌಡ ತುರ್ವಿಹಾಳ ಹೇಳಿದ್ದೇನು? 

12/09/2021, 19:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ 17ನೇ ವಾರ್ಡನಲ್ಲಿ ಡ್ರೈನೇಜ್ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. 

ಮಸ್ಕಿ ತಾಂಡಾ ಸಿಸಿ ರಸ್ತೆ ಮತ್ತು ಹಲವಾರು ಕಡೆ ಮಸ್ಕಿಯಲ್ಲಿ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು. ಕಾರ್ಯನಿರತ ಪತ್ರಿಕಾ ಭವನ ಅರ್ಧಕ್ಕೆ ನಿಂತಿದ್ದನ್ನು ಪರಿಶೀಲಿಸಿ ಸದ್ಯದಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದರು. ಕಾರ್ಯನಿರತ ಪತ್ರಿಕೆ ಸಂಘಟನೆಯಿಂದ ಶಾಸಕರಿಗೆ ಸನ್ಮಾನಿಸಲಾಯಿತು. ವೇದಿಕೆಯನ್ನು ಉದ್ದೇಶ ಮಾತನಾಡಿದ ಶಾಸಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಸೇವೆ ಮಾಡಲು ಸದಾ ಸಿದ್ಧ. ನಿಮ್ಮ ಋಣದ ಭಾರ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸ ಕ್ಷೇತ್ರದಲ್ಲಿ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಇನ್ನೊಮ್ಮೆ ಮತದಾರರು ಕೈ ಹಿಡಿಯಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು, ಎಚ್.ಬಿ. ಮುರಾರಿ, ಪಂಪನಗೌಡ ಉದ್ದಿಹಾಳ, ವೆಂಕಟರೆಡ್ಡಿ ಹಾಲಾಪುರ, ಕೃಷ್ಣಾ ಚಿಗರಿ‌, ಬಸನಗೌಡ ಮುದವಾಳ, ಮಲ್ಲಯ್ಯ ಪೂಜಾರಿ, ಸುರೇಶ್ ಬ್ಯಾಳಿ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಮುರಾರಿ, ಬಳ್ಳಾ ಮಲ್ಲಯ್ಯ, ವೀರೇಶ ಆನೆಹೂಸರು, ರವಿಕುಮಾರ್ ಮಡಿವಾಳ, ನಾಗರಬೆಂಚಿ ಮಲ್ಲಣ್ಣ, ಬಿ.ಜಿ.ಯಲ್ಲಮ್ಮ ನಾಯಕ್, ಖಾದರಬೀ, ಹಾಗೂ ಇನ್ನಿತರ ಉಪಸ್ಥಿತಿ 
ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು