10:46 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಎಸಿ ಸ್ಫೋಟಗೊಂಡು ಭೀಕರ ಬೆಂಕಿ ಅವಘಡ: 9 ಜನರು ಸಜೀವದಹನ

03/05/2026, 18:40

ನವದೆಹಲಿ(reporterkarnataka@gmail.com): ವಸತಿ ಕಟ್ಟಡದಲ್ಲಿ ಎಸಿ ಸ್ಫೋಟಗೊಂಡು ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 9 ಜನರು ಸಜೀವದಹನವಾಗಿರುವ ಘಟನೆ ನವದೆಹಲಿಯ ವಿವೇಕ ವಿಹಾರದಲ್ಲಿ ನಡೆದಿದೆ.

ವಿವೇಕ ವಿಹಾರದ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಇಂದು ಮುಂಜಾನೆ 3:47ರ ಸುಮಾರಿಗೆ ಎಸಿ ಸ್ಫೋಟಗೊಂಡ ಪರಿಣಾಮ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 9 ಜನರು ಸಜೀವದಹನವಾಗಿದ್ದಾರೆ. ಘಟನೆಯಲ್ಲಿ 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಕಿಯ ಕೆನ್ನಾಲಿಗೆ ಕಟ್ಟಡದ ತುಂಬಾ ವ್ಯಾಪಿಸಿದ್ದು, ಹಲವರು ಹೊರಬರಲಾಗದೇ ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ 14 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಚುರುಕುಗೊಂಡಿದೆ.
ಕಟ್ಟಡದ ಒಳಗೆ ಸಿಲುಕಿರುವವರನ್ನು ಹೊರತರಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು