ಇತ್ತೀಚಿನ ಸುದ್ದಿ
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
24/04/2026, 12:54
ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನ ರಾಂಪುರ ಬಳಿ ಗುರುವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದಟ್ಟವಾದ ಕಪ್ಪು ಹೊಗೆ ಸುಮಾರು 10 ಕಿ.ಮೀ.ವರೆಗೂ ಗೋಚರಿಸಿದೆ.





ಪ್ಲಾಸ್ಟಿಕ್ ಮರುಬಳಕೆ ಗೋದಾಮಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ(ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವರಿಂದ ಸುತ್ತಮುತ್ತ ಆತಂಕದ ವಾತವರಣ ನಿರ್ಮಾಣವಾಗಿತ್ತು.












