5:14 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು; ಪಶ್ಚಿಮ ಘಟ್ಟದ ಹುಲ್ಲುಗಾವಲು ಭಸ್ಮ; ಕಿಡಿಗೇಡಿಗಳಿಂದ ಕೃತ್ಯ?

03/02/2026, 12:39

ಚಿಕ್ಕಮಗಳೂರು(reporterkarnataka.com): ಚಾರ್ಮಾಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು ಕಾಣುಸಿಕೊಂಡಿದ್ದು, ಬೆಂಕಿಯ ತೀವ್ರತೆಗೆ ಅರಣ್ಯದ ಸೂಕ್ಷ್ಮ ಹುಲ್ಲುಗಾವಲುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ಮಾರ್ಗದ ಸಮೀಪವೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ ಭೀತಿ ಮೂಡಿದೆ. ಗಾಳಿ ವೇಗವಾಗಿ ಬೀಸುತ್ತಿರುವ ಕಾರಣ ಬೆಂಕಿ ಕ್ಷಣ ಕ್ಷಣಕ್ಕೂ ವ್ಯಾಪಿಸುತ್ತಿದ್ದು, ನಿಯಂತ್ರಣ ಕಾರ್ಯಾಚರಣೆ ಕಷ್ಟಕರವಾಗಿದೆ.

ದಟ್ಟ ಹೊಗೆಯಿಂದ ಸುತ್ತಮುತ್ತಲ ಪ್ರದೇಶಗಳು ಆವರಿಸಲ್ಪಟ್ಟಿದ್ದು, ಚಾರ್ಮಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಅರಣ್ಯ ಇಲಾಖೆ ತನಿಖೆ ಆರಂಭಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಕಠಿಣ ಭೂಭಾಗ ಮತ್ತು ಗಾಳಿ ವೇಗ ಹೆಚ್ಚಿರುವುದರಿಂದ ಕಾರ್ಯಾಚರಣೆಗೆ ಅಡೆತಡೆ ಎದುರಾಗಿದೆ. ಈ ಕಾಡ್ಗಿಚ್ಚಿನಿಂದ ಅರಣ್ಯದ ಜೀವಜಾಲಕ್ಕೂ ಭಾರೀ ಅಪಾಯ ಎದುರಾಗಿದ್ದು, ಪರಿಸರ ತಜ್ಞರು ಇಂತಹ ಘಟನೆಗಳು ಪಶ್ಚಿಮ ಘಟ್ಟದ ಪರಿಸರ ಸಮತೋಲನಕ್ಕೆ ಗಂಭೀರ ಹೊಡೆತ ನೀಡುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು