12:42 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ: ಚಿಲುವೆ ಸಂಸ್ಥೆ ವಿರುದ್ಧ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

03/10/2023, 17:52

ಬೆಂಗಳೂರು(reporterkarnataka.com): ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ ಹೊತ್ತಿರುವ ಚಿಲುಮೆ ಸಂಸ್ಥೆ ಇದೀಗ ಸಂಕಷ್ಟಕ್ಕೀಡಾಗಿದೆ. ಪ್ರಕರಣದ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಲುಮೆ ಎಂಬ ಸಂಸ್ಥೆಯು ಮತದಾರರ ಜಾಗೃತಿ ಹಾಗೂ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಸಂಗ್ರಹ ಮಾಡಿದೆ ಎಂಬ ಆರೋಪವಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರು ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಕ್ಕೆ ಅವಕಾಶ ನೀಡಿ, ಕರ್ತವ್ಯಲೋಪ ಎಸಗಿರುವ ಸಂಬಂಧ ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್‌ ಬಾಬು ಅವರು ತನಿಖೆ ನಡೆಸುವಂತೆ ಕೋರಿದ್ದರು. ಈ ಸಂಬಂಧ ಪೂರ್ಣ ಪ್ರಮಾಣದ ತನಿಖೆ ನಡೆಸಿ, ವಿವರವಾದ ವರದಿ ಸಲ್ಲಿಸುವಂತೆ ಸಿಎಂ ಸೂಚಿಸಿದ್ದಾರೆ.
ಬಿಬಿಎಂಪಿಯಿಂದ ಬಿಎಲ್‌ಒ (ಬೂತ್ ಮಟ್ಟದ ಅಧಿಕಾರಿ) ಎಂದು ಗುರುತಿನ ಚೀಟಿ ಹಾಕಿಕೊಂಡು ಈ ಅಕ್ರಮ ಎಸೆಯಲಾಗಿದೆ. ಈ ಅಕ್ರಮದ ಹಿಂದೆ ಸಚಿವರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು