12:10 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮತಾಂತರದ ಕಾಯ್ದೆಯಿಂದ ಯಾರು ಭಯ ಪಡಬೇಕಾಗಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

24/12/2021, 12:34

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬಿಜೆಪಿ ಸರ್ಕಾರ ವಿಪಕ್ಷಗಳ ವಿರೋಧ ನಡುವೆ ಮತಾಂತರ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ ಈ ಕಾಯ್ದೆಯಿಂದ ಯಾರು ಭಯಪಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದರು. 

ಅವರು ಅಥಣಿ ಪಟ್ಟಣದ ಪುರಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕೈಗೊಂಡ ಸಮಯದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದರು. 

ಮತಾಂತರ ಕಾಯ್ದೆ ಜಾರಿಯಿಂದ ಭಯ ಬೇಡ, ಒಂದೇ ಸಮಾಜಕ್ಕೆ ಸೀಮಿತವಾಗಿಲ್ಲ, ಅಲ್ಪಸಂಖ್ಯಾತರನ್ನು ಗುರಿ ಮಾಡಿ ಈ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಆದರೂ ಎಲ್ಲರಿಗೂ ಈ ಮತಾಂತರ ಕಾಯ್ದೆ ಅನ್ವಯ ಆಗುತ್ತದೆ ಎಂದು ತಿಳಿಸಿದರು. 

ಮಹಾರಾಷ್ಟ್ರ ರಾಜ್ಯದಲ್ಲಿ ಕನ್ನಡ ಬಾವುಟ ಅವಮಾನ ಮಾಡುತ್ತಿದ್ದಾರೆ, ಅವರ ರಾಜ್ಯದಲ್ಲಿ ದುಷ್ಕೃತ್ಯ ಮಾಡುವುದರಿಂದ ನಾವು ಏನು ಮಾಡುದಕ್ಕೆ ಆಗುವುದಿಲ್ಲ. ನಮ್ಮ ರಾಜ್ಯದಲ್ಲಿ ಆಗಿರುವ ಘಟನೆಗೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.  ನಾವು ಇದರಬಗ್ಗೆ ಹೆಚ್ಚಿಗೆ ಮಾತನಾಡು ಅವಶ್ಯಕತೆ ಇಲ್ಲಾ, ಕನ್ನಡ ಬಾವುಟಕ್ಕೆ ಅವಮಾನ ಮಾಡಿರುವುದಕ್ಕೆ ಸರ್ಕಾರ ಇಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ತಿಳಿಸಿದರು. ನಾವು ಕನ್ನಡ ಪರವಾಗಿ ಇದ್ದೆವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು