10:20 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮತಾಂತರ ನಿಷೇಧ ಕಾಯಿದೆ ಜಾರಿಗೆ ಶೀಘ್ರದಲ್ಲೇ  ಸುಗ್ರೀವಾಜ್ಞೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

09/04/2022, 13:12

ಮೈಸೂರು(reporterkarnataka.com): ಶೀಘ್ರದಲ್ಲೇ ಮತಾಂತರ ನಿಷೇಧ ಕಾಯಿದೆಯನ್ನು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಾರಿಗೆ ತರಲಾಗುವುದು ಎಂದು ಹಿಂದುಳಿದ ವರ್ಗಗಳ ಮತ್ತು ಸ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸಭೆಯನ್ನು ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿ ವಿಧಾನ ಪರಿಷತ್‌ನಲ್ಲಿ ಅನುಮೋದನೆ ಪಡೆಯಲಾಯಿತು. ಆದರೆ, ಮತಾಂತರ ನಿಷೇಧಕ್ಕೆ ಅವಕಾಶ ಸಿಗದ ಕಾರಣ ಮುಂದಿನ ದಿನಗಳಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಮುಂದೆ ಬಹುಮತದ ಆಧಾರದ ಮೇಲೆ ಮಸೂದೆಗೆ ಅನುಮೋದನೆ ಪಡೆಯಲಾಗುವುದು ಎಂದು ಹೇಳಿದರು.

ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ನೀಡಿದ್ದರೂ ಪಾಲನೆ ಮಾಡಬೇಕಾದ ಕಾಂಗ್ರೆಸ್ ನಾಯಕರು ಭಿನ್ನ ನಡೆ ಅನುಸರಿಸುತ್ತಿದ್ದು, ದೇಶ ಒಂದು ಕಡೆಯಾದರೆ, ಕಾಂಗ್ರೆಸ್ ಮತ್ತೊಂದು ದಿಕ್ಕಿನತ್ತ ಸಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ನ್ಯಾಯಾಲಯವು ಕೊಟ್ಟ ತೀರ್ಪು ಗೌರವಿಸಬೇಕು. ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿ. ಆದರೆ, ನ್ಯಾಯಾಲಯದ ತೀರ್ಪನ್ನು ಬದಿಗೊತ್ತಿ ನಾವು ಹೇಳಿದ್ದನ್ನು ಮಾಡಬೇಕು ಎನ್ನುತ್ತಾರೆ. ದೇಶ,ಪ್ರಪಂಚ ಒಂದು ಕಡೆಯ ಹಾದಿಯಲ್ಲಿ ಹೋದರೆ, ಕಾಂಗ್ರೆಸ್ ನಾಯಕರು ಅದಕ್ಕೆ ವ್ಯತಿರಿಕ್ತವಾಗಿ ಸಾಗುತ್ತಿದ್ದಾರೆ ಎಂದು ಕಿಡಿಕಾರಿದರು. ಮುಂದಿನ ದಿನಗಳಲ್ಲಿ ನಮ್ಮ ವೈಚಾರಿಕ ನಿಲುವುಗಳನ್ನು ಜನರ ಮುಂದೆ ಹೇಳಿಕೊಂಡು ಸಾಗಬೇಕು. ರಾಜಕೀಯ ಹಿನ್ನೆಡೆ ಅನುಭವಿಸ ಬದಲಿಗೆ ಜನಪರ ಕಾರ್ಯಕ್ರಮಗಳನ್ನು ಜನರ ಬಳಿಗೆ ಕೊಂಡೊಯ್ಯಲು ಯತ್ನಿಸಬೇಕು. ಮಂತ್ರಿ, ಸಿಎಂ ಸೇರಿದಂತೆ ಪ್ರತಿಯೊಬ್ಬರೂ ವೈಚಾರಿಕ ವಿಚಾರಗಳನ್ನು ಗಟ್ಟಿಗೊಳಿಸಬೇಕು. ನಮ್ಮ ಆಚಾರ ವಿಚಾರಗಳನ್ನು ಮನವರಿಕೆ ಮಾಡಿಕೊಡಬೇಕು. ಸಾಲ ಮನ್ನಾ ಮಾಡಿ ಎನ್ನುವ ಕೂಗಿನ ಬದಲಿಗೆ ಪಿಎಂ ಸಮ್ಮಾನ್ ಕಿಸಾನ್ ಯೋಜನೆಯಿಂದ ವರ್ಷಕ್ಕೆ ಹತ್ತು ಸಾವಿರ ರೂ.ಗಳು ರೈತರ ಮನೆಬಾಗಿಲಿಗೆ ತಲುಪುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಬದಲಾವಣೆ, ಮೀನುಗಾರಿಕೆ ಯೋಜನೆ, ಹಿಂದುಳಿದ ವರ್ಗದ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು. ಅಧಿಕಾರಿಗಳ ಮಾನಸಿಕವಾಗಿ ಬದಲಾವಣೆ ಆಗಬೇಕು. ಕಚೇರಿಗೆ ಸೀಮಿತವಾಗದೆ ಕ್ಷೇತ್ರದಲ್ಲಿ ಇದ್ದು ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ಮಾಡಬೇಕು. ಪ್ರತಿ?ಂAದು ವಿಚಾರಗಳ ಬಗ್ಗೆ ಕಣ್ಗಾವಲು ಇಡಬೇಕು ಎಂದು ಕಿವಿಮಾತು ಹೇಳಿದರು.

ದಿನದಿಂದ ದಿನಕ್ಕೆ ಕಾರ್ಯಕರ್ತರ ಸಂಖ್ಯೆ ಜಾಸ್ತಿಯಾಗಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಸಮರ್ಥ ಭಾರತ ಸ್ವಾಭಿಮಾನಿ ಭಾರತ ನಿರ್ಮಾಣವಾಗಿದೆ. ಪ್ರಧಾನಮಂತ್ರಿ ಕಾರ್ಯಶೈಲಿಯಿಂದಾಗಿ ಕೋವಿಡ್ ಸವಾಲಿನ ನಡುವೆ ದೇಶ ಅಭಿವೃದ್ಧಿಯಾಗಿದೆ. ನಮ್ಮ ವಿರುದ್ಧ ಮಾತನಾಡುವವರು ದಿಗ್ಬçಮೆ ಹೊಂದುವ ರೀತಿ ಕೆಲಸ ಮಾಡಲಾಗಿದೆ. ಉಕ್ರೇನ್ ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಭಾರತಕ್ಕೆ ತರಲಾಗಿದೆ. ಪ್ರತಿಕ್ಷಣ ಜೀವ ಇರುತ್ತದೆ ಅನ್ನುವ ನಂಬಿಕೆ ಇರಲಿಲ್ಲ.ಆದರೆ ಭಾರತೀಯ ರಾದ ನಾವು ಸುರಕ್ಷಿತವಾಗಿ ತಲುಪಲಿದ್ದೇವೆ ಎನ್ನುವ ಆಶಾಭಾವನೆ ಇತ್ತು. ಬದಲಾದ ಭಾರತದ ಶಕ್ತಿ ತೋರಿಸುತ್ತದೆ. ಸಾಮಾನ್ಯ ಕಾರ್ಯಕರ್ತನಿಗೆ ಇದಕ್ಕಿಂತ ಹೆಮ್ಮೆ ವಿಚಾರ ಬೇರೆ ಏನಿಲ್ಲ ಎಂದರು. ಹಲವಾರು ಸಮಸ್ಯೆಗಳಿಗೆ ಪರಿಹಾರ. ಇಡೀ ದೇಶದಲ್ಲಿ ಭಾರತ ಒಂದಾಗುತ್ತಿದೆ. ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆ ಕಡಿಮೆಯಾಗಿದೆ. 360 ಕಲಂ ರದ್ದು ಮಾಡಿದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುತ್ತಿದ್ದಾರೆ. ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಸಂದಿಗ್ಧ ಪರಿಸ್ಥಿತಿಯನ್ನು ನಿವಾರಣೆ ಮಾಡಿದ ಮೋದಿಯ ಸಂಕಲ್ಪದಿಂದಾಗಿ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಈ ವೇಳೆ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಎ.ಹೇಮಂತ್ ಕುಮಾರ್ ಗೌಡ, ನಗರಪಾಲಿಕೆ ನಾಮ ನಿರ್ದೇಶಿತರಾದ ಆಶಾ ನಾಗಭೂಷಣ್ ಸಿಂಗ್, ಕೆ.ಜೆ.ರಮೇಶ್, ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಜೋಗಿ ಮಂಜು,ಗ್ರಾಮಾAತರ ಜಿಲ್ಲಾ ಅಧ್ಯಕ್ಷ ಪರಶುರಾಮಪ್ಪ, ಎಸ್. ಟಿ. ಮೋರ್ಚಾ ಅಧ್ಯಕ್ಷ ಲಕ್ಷತ್ಮಣ್ ,ಪ್ರಧಾನ ಕಾರ್ಯದರ್ಶಿ ಮಣಿರತ್ನಂ ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು