7:54 AM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಮತೀಯ ಸಂಘರ್ಷ: ಗೃಹ ಸಚಿವ ಅರಗ ಜ್ಞಾನೇಂದ್ರ ತಲೆದಂಡ?: ಯಾರು ಹೊಸ ಹೋಮ್ ಮಿನಿಸ್ಟರ್? 

07/08/2022, 11:33

ಬೆಂಗಳೂರು(reporterkarnataka.com): ಮತೀಯ ಸಂಘರ್ಷ, ಕೋಮು ದಳ್ಳುರಿಗೆ ರಾಜ್ಯ ತತ್ತರಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯ ಗೃಹ ಸಚಿವರನ್ನು ಬದಲಾಯಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ಮಸೂದ್, ಪ್ರವೀಣ್ ಮತ್ತು ಫಾಝೀಲ್ ಹತ್ಯೆ ಬಳಿಕ ನಡೆದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಬೆಂಗಳೂರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿ ದೆಹಲಿಗೆ ಹಿಂತಿರುಗಿದ್ದಾರೆ.

ಬಿಜೆಪಿ ಹೈಕಮಾಂಡ್ ಕಂಡುಕೊಂಡ ಅಭಿಪ್ರಾಯದ ಪ್ರಕಾರ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಡಲು ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ವೈಫಲ್ಯವೇ ಕಾರಣ ಎನ್ನಲಾಗಿದೆ. ಜತೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಸಡಿಲ ಆಡಳಿತವೂ ಇದಕ್ಕೆ ಪೂರಕ ವಾತಾವರಣ ನಿರ್ಮಿಸಿ ಕೊಟ್ಟಿದೆ ಎಂಬ ಅಭಿಪ್ರಾಯಕ್ಕೆ ಬಿಜೆಪಿ ಹೈಕಮಾಂಡ್ ಬಂದಿದೆ ಎನ್ನಲಾಗಿದೆ

ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ, ಬಿಜೆಪಿ ನಾಯಕರ ಬಗ್ಗೆ ಪಕ್ಷದ ಕಾರ್ಯಕರ್ತರ ಅಸಮಾಧಾನ, ದುರ್ಬಲ ಆಡಳಿತ ಬಗ್ಗೆ ಪ್ರತಿಪಕ್ಷಗಳ ಟೀಕೆಯಿಂದ ಬಿಜೆಪಿ ಹೈಕಮಾಂಡ್ ತತ್ತರಿಸಿ ಹೋಗಿದೆ. ಜತೆಗೆ ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ಕೂಡ ನಡೆಯಲಿದೆ.

ಈ ಎಲ್ಲ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತರಾತುರಿಯಲ್ಲಿ ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ನಿಮ್ಮ ಕೈಯಲ್ಲಿ ಆಗದಿದ್ದರೆ ಹೇಳಿ ಎಂದು ಪರೋಕ್ಷವಾಗಿ ಕುರ್ಚಿ ಬಿಟ್ಟು ಹೋಗಿ ಎಂಬ ಸಂದೇಶ ನೀಡಿದ್ದರು.

ರಾಜ್ಯದಲ್ಲಿ ಸರಣಿ ಹತ್ಯೆಯ ಮುನ್ನವೇ ಮತೀಯ ಸಂಘರ್ಷದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಹಿಜಾಬ್ ವಿವಾದದಿಂದ ಶುರುವಾಗಿತ್ತು. ನಂತರ 

ಹಲಾಲ್, ಜಟ್ಕಾ ಕಟ್, ಮೈಕ್ ವಿವಾದ ಸೇರಿದಂತೆ ರಾಜ್ಯದಲ್ಲಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೋಮು ಸಂಬಂಧಿತ ವಿವಾದಗಳು ತೀವ್ರವಾಗಿತ್ತು. ನಂತರ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ಬಳಿಕ ಸರ್ಕಾರದ ಬಗ್ಗೆ ಸ್ವತಃ ಹಿಂದೂ ಕಾರ್ಯಕರ್ತರ ಅಸಮಾಧಾನ ಭುಗಿಲೆದ್ದಿತು. 

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಹರ್ಷನ ಹತ್ಯೆ ಆರೋಪಿಗಳು ಜೈಲಿನಲ್ಲಿ ಬಿಂದಾಸ್ ಆಗಿದ್ದಾರೆ ಎನ್ನುವಂತಹ ಸುದ್ದಿಗಳು ಹೊರ ಬಂದು ಸಂಘಟನೆಯ ಕಾರ್ಯಕರ್ತರು ಹಾಗೂ ಹರ್ಷ ಕುಟುಂಬಸ್ಥರ ಆಕ್ರೋಶ ಹೆಚ್ಚಿದ್ದವು. ಇವೆಲ್ಲದರ ಪರಿಣಾಮ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ತಲೆದಂಡ ಬಹುತೇಕ ಖಚಿತವಾಗಿದೆ. ಕಂದಾಯ ಸಚಿವ ಆರ್. ಅಶೋಕ್  ಅವರನ್ನು

ಮುಂದಿನ ಗೃಹ ಸಚಿವರನ್ನಾಗಿ ಮಾಡುವ ಇಂಗಿತವನ್ನು ಪಕ್ಷದ ಹೈಕಮಾಂಡ್ ಹೊಂದಿದೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು