4:31 AM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಮತ ಎಣಿಕೆ ಕೇಂದ್ರದ ಸಿದ್ದತೆ: ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ

31/05/2024, 20:07

ಮಂಗಳೂರು(reporterkarnataka.com): ಈಗಾಗಲೇ ಏಪ್ರಿಲ್ 26 ರಂದು ಜರುಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ಜರುಗಲಿದ್ದು,ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಅವರು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತ ಎಣಿಕೆ ಪ್ರಕ್ರಿಯೆಗಳ ಕುರಿತು ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದರು.
ಜೂನ್ 4ರಂದು ಬೆಳಗ್ಗೆ ಸ್ಟ್ರಾಂಗ್ ರೂಮ್ ತೆರೆಯುವು ದರಿಂದ ಹಿಡಿದು ಸಂಜೆ ಇವಿಎಂ ಮಷಿನ್‍ಗಳು ಭದ್ರತಾ ಕೊಠಡಿಗೆ ಇರಿಸುವವರೆಗಿನ ಎಲ್ಲಾ ಹಂತಗಳನ್ನು ಚುನಾವಣಾಧಿಕಾರಿ ಮುಲೈ ಮುಗಿಲನ್ ಅವರು ಸಭೆಯಲ್ಲಿ ವಿವರಿಸಿದರು.
ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಭಾರತ ಚುನಾವಣಾ ಆಯೋಗ ನೀಡಿದ್ದು, ಪ್ರತಿ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟ್ , ಮತ ಎಣಿಕಾ ಏಜೆಂಟರಿಗೆ ಕಡ್ಡಾಯವಾಗಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಬೇಕೆಂದು ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಹೇಳಿದರು.
ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಎಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ನಿಗದಿತ ಸ್ಥಳ ಗುರುತಿಸಿ ಸಿದ್ದತೆ ಮಾಡಲಾಗಿದೆ. ಅಂದು ಮತ ಎಣಿಕಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ಅಡಿ. ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅನಗತ್ಯ ಓಡಾಟ ಮಾಡುವಂತಿಲ್ಲ ಎಂದು ಅವರು ಹೇಳಿದರು.
ಮತ ಎಣಿಕಾ ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.
ಚುನಾವಣಾ ಆಯೋಗದ ಎಲ್ಲಾ ನಿಯಮಗಳನ್ನು ಪಾಲಿಸುವ ಮೂಲಕ ಮತ ಎಣಿಕೆ ಕಾರ್ಯ ನಿಯಮಾನುಸಾರ, ಸುಗಮವಾಗಿ ಜರುಗಲು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಅವರು ನುಡಿದರು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಪಕ್ಷೇತರ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಸಂತೋಷ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು