8:39 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮತದಾರ ಪ್ರಭುಗಳು, ಪಕ್ಷದ ಕಾರ್ಯಕರ್ತರೇ ಸ್ಟಾರ್ ಪ್ರಚಾರಕರು: ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

06/04/2024, 22:21

ಮಂಗಳೂರು(reporterkarnataka.com): ಮತದಾರ ಪ್ರಭುಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್‌‌ಗಳು. ನನ್ನ ಪ್ರೀತಿಯ ಕಾರ್ಯಕರ್ತರ ನಿರಂತರ ಶ್ರಮವೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ..
ಇದು ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆರ್. ಪೂಜಾರಿ ಅವರ ಭರವಸೆಯ ಮಾತು.
ವಿಧಾನಸಭಾ ಸ್ಪೀಕರ್‌ ಯು.ಟಿ.ಖಾದರ್‌ ಅವರ ಮಂಗಳೂರು ಕ್ಷೇತ್ರ ವ್ಯಾಪ್ತಿಯ ಕಲ್ಲಾಪು ಗ್ಲೋಬಲ್ ಮಾರ್ಕೆಟ್, ಆಟೋ ನಿಲ್ದಾಣದಲ್ಲಿ ಚುನಾವಣಾ ಪ್ರಚಾರ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.


ಈ ಮಾರುಕಟ್ಟೆಯ ವರ್ತಕರು ನನಗೆ ನೀಡಿದ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಮಂಗಳೂರು ಸೆಂಟ್ರಲ್ ಮಾರುಕಟ್ಟೆ ಸಮಸ್ಯೆಯಿಂದ ವರ್ತಕರು ಯಾವ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ ಎನ್ನುವುದನ್ನು ನಾನು ಅರಿತಿದ್ದೇನೆ. ಮಂಗಳೂರು ನಗರ ದೇಶದ ಬಲಿಷ್ಠ ನಗರಗಳಲ್ಲಿ ಒಂದಾಗಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಸುಸಜ್ಜಿತ ಅಂತಾರಾಷ್ಟ್ರೀಯ ಮಾದರಿಯ ಮಾರುಕಟ್ಟೆ ನಿರ್ಮಾಣಕ್ಕೆ ಶಕ್ತಿಮೀರಿ ಪ್ರಯತ್ನಿಸುವುದಾಗಿ ತಿಳಿಸಿದರು.
ಕುತ್ತಾರು ಆದಿಕ್ಷೇತ್ರ ಕೊರಗಜ್ಜನ ಸನ್ನಿಧಾನ, ಕುತ್ತಾರು ಆದಿಸ್ಥಳ ಶ್ರೀರಕ್ತೇಶ್ವರಿ ಕೊರಗಜ್ಜ ಕ್ಷೇತ್ರ, ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕೊಲ್ಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದರು.
ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ, ಸೋಮೇಶ್ವರ ಪುರಸಭೆ ಸದಸ್ಯ ದೀಪಕ್ ಪಿಲಾರ್, ಕಾಂಗ್ರೆಸ್ ಹಿರಿಯ ಮುಖಂಡರಾದ ಮೋನಕ್ಕ, ತಾಪಂ ನಿಕಟಪೂರ್ವ ಅಧ್ಯಕ್ಷ ಮಹಮ್ಮದ್ ಮೋನು, ಮಾಜಿ ಕೌನ್ಸಿಲರ್ ಉಸ್ಮಾನ್, ಗ್ಲೋಬಲ್ ಮಾರುಕಟ್ಟೆ ಪ್ರಧಾನ‌ ಕಾರ್ಯದರ್ಶಿ ಹಾಶೀರ್, ಪ್ರಚಾರ ಸಮಿತಿಯ ಖಾದರ್ ಉಳ್ಳಾಲ, ಪಿಯೂಸ್ ಡಿಸೋಜ, ವಿಲ್ಮಾ ಡಿಸೋಜ, ಪ್ರಭಾವತಿ ಶೆಟ್ಟಿ, ನಂದಿನಿ ಮೊದಲಾದವರಿದ್ದರು.
*ಮಾಜಿ ಶಾಸಕಿ ಆಶೀರ್ವಾದ:*
ಪದ್ಮರಾಜ್ ಆರ್.‌ ಅವರು
ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಮಾಜಿ ಶಾಸಕಿ, ಮೂವತ್ತು ವರ್ಷದ ಬಳಿಕ ಮತ್ತೊಮ್ಮೆ ಕಾಂಗ್ರೆಸ್‌ನ ಗತವೈಭವವನ್ನು ಕಾಣುವಂತೆ ಮಾಡಬೇಕು. ಮಾಜಿ ಸಚಿವರಾದ ಬಿ. ಜನಾರ್ದನ ಪೂಜಾರಿಯವರಂತೆ ಆರ್ಥಿಕವಾಗಿ ಹಿಂದುಳಿದವರ ಸೇವೆ ಮಾಡಬೇಕು ಎಂದು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು