1:23 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮತದಾರರ ದತ್ತಾಂಶಕ್ಕೆ ಕನ್ನ: ಕಾಂಗ್ರೆಸ್ ಆರೋಪ; ಮುಖ್ಯಮಂತ್ರಿ ಬಂಧನಕ್ಕೆ ಸುರ್ಜೇವಾಲಾ ಆಗ್ರಹ

17/11/2022, 20:24

ಬೆಂಗಳೂರು(reporterkarnataka.com): ಮತದಾರರ ದತ್ತಾಂಶ ಕಳವು ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಿ ಅವರನ್ನು ತಕ್ಷಣ ಬಂಧಿಸಬೇಕು ಹಾಗೂ ಪ್ರಕರಣದ ಕುರಿತು ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್
ಸುರ್ಜೇವಾಲಾ, ಮತದಾರರ ಅಂಕಿ-ಅಂಶಗಳನ್ನು (ಡಾಟಾ) ಖಾಸಗಿ ಸಂಸ್ಥೆಯೊಂದು ಅಕ್ರಮವಾಗಿ ಸಂಗ್ರಹಿಸುತ್ತಿದ್ದು, ಮತದಾರರ ವೈಯಕ್ತಿಕ ಮಾಹಿತಿಯ ದತ್ತಾಂಶವನ್ನು ಕದಿಯುವ ಕೆಲಸಕ್ಕೆ ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಅವರೇ ಕಾರಣ, ಅವರ
ಮೇಲೆ ಎಫ್‌ಐಆರ್ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ
ಡಿ.ಕೆ ಶಿವಕುಮಾರ್ ಉಪಸ್ಥಿತರಿದ್ದರು.

ಚಿಲುಮೆ ಎಂಬ ಸರ್ಕಾರೇತರ ಸಂಸ್ಥೆ ತನ್ನ ಏಜೆಂಟರಿಗೆ ನಕಲಿ ಐಡಿ ಕಾರ್ಡ್ ನೀಡಿ ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಮತದಾರರ
ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿದೆ. ಈ ಅಕ್ರಮದ ಹೊಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊರಬೇಕು ಹಾಗೂ
ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಖಾಸಗಿ ಸಂಸ್ಥೆಯಾದ ಚಿಲುಮೆಗೆ ಮತದಾರರ ಡಾಟಾ ಸಂಗ್ರಹಿಸಲು ಅವಕಾಶ ಸಿಕ್ಕಿದ್ದು ಹೇಗೆ,ಅಕ್ರಮವಾಗಿ ಡಾಟಾ ಸಂಗ್ರಹಿಸುತ್ತಿರುವುದು ಯಾಕೆ?
ಬೂತ್ ಮಟ್ಟದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ.ಎಂದು ಪ್ರಶ್ನಿಸಿದ ಅವರು ಮತದಾರರ ಮಹಿತಿಯನ್ನು ಸರ್ಕಾರ ಸಂಗ್ರಹಿಸಬೇಕು, ಇಲ್ಲಿ ಖಾಸಗಿ ಸಂಸ್ಥೆ ಆ ಕೆಲಸ ಮಾಡುತ್ತಿದೆ. ನಕಲಿ ಗುರುತಿನ ಚೀಟಿ ಇಟ್ಟು-
ಕೊಂಡು ಈ ಸಂಸ್ಥೆ ಏಜೆಂಟರುಗಳು ಮತದಾರರ ಮೊಬೈಲ್ ಸಂಖ್ಯೆ, ವಿಳಾಸ, ಇತರೆ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಇದರ ಹಿಂದೆ
ಕೃಷ್ಣಪ್ಪ ಹಾಗೂ ರವಿಕುಮಾರ್ ಎಂಬುವರು ಇದ್ದಾರೆ. ಈ ಇಬ್ಬರು
ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಸಚಿವರ ಆಪ್ತರು ಎಂದರು.
ಮತದಾರರ ದತ್ತಾಂಶವನ್ನು ಖಾಸಗಿ ಕಂಪನಿ ಮೂಲಕ ಸರ್ಕಾರ ಕದಿಯುವ ಅಕ್ರಮ ನಡೆಸಿರುವ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ದಾಖಲೆಗಳನ್ನು ಬಿಡುಗಡೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು