10:07 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮತ್ತೆ ಕಾಂಗ್ರೆಸ್ ವೇದಿಕೆಯೇರಿದ ಹಿರಿಯ ಮುತ್ಸದ್ಧಿ: ‘ಪ್ರಜಾಧ್ವನಿ’ಯಲ್ಲಿ ಸಿದ್ದರಾಮಯ್ಯ- ಪೂಜಾರಿ ಸಮಾಗಮ!

23/01/2023, 11:20

ಮಂಗಳೂರು(reporterkarnataka.com): ದಶಕಗಳ ಬಳಿಕ ಕಾಂಗ್ರಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ವೇದಿಕೆ ಹಂಚಿಕೊಂಡ ಎಲ್ಲರ ಕುತೂಹಲಕ್ಕೆ ಕಾರಣರಾದರು. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟು ಟೀಕೆಕಾರರಾದ ಪೂಜಾರಿ ಅವರು ಭಾನುವಾರ ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡರು. ವಯೋಸಹಜ ಸಮಸ್ಯೆಗಳಿದ್ದರೂ ಪೂಜಾರಿ ಅವರು ತಾಳ್ಮೆಯಿಂದ ಎಲ್ಲ ನಾಯಕರುಗಳ ಭಾಷಣವನ್ನು ಆಲಿಸಿದರು. ಕಾಂಗ್ರೆಸ್ ನ ಭೀಷ್ಮ ಎಂದೇ ಪರಿಗಣಿಸಲ್ಪಟ್ಡ ಪೂಜಾರಿ ಅವರ ಜತೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸುರ್ಜೇವಾಲ, ಡಾ.ಜಿ. ಪರಮೇಶ್ವರ್ ಸೇರಿದಂತೆ ಪಕ್ಷದ ಘಟಾನುಘಟಿಗಳು ಗ್ರೂಪ್ ಫೋಟೋ ತೆಗೆಸಿಕೊಂಡರು.

2013ರಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರ ಕಾರ್ಯ ವೈಖರಿಯನ್ನು ಪೂಜಾರಿ ಅವರು ಕಟು ಟೀಕೆ ಮಾಡುತ್ತಿದ್ದರು.

ಅಂದು ಹಂಪನಕಟ್ಟೆಯ ಬಾಡಿಗೆ ಕಟ್ಟಡದಲ್ಲಿದ್ದ ಕಾಂಗ್ರೆಸ್ ಕಚೇರಿಯಲ್ಲಿ ಪೂಜಾರಿ ಅವರು ಪತ್ರಿಕಾಗೋಷ್ಠಿ ಕರೆದು ಕಾಂಗ್ರೆಸ್ ಸರಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ನಂತರ ಅಂದಿನ ಕೆಪಿಸಿಸಿ ಅಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ಅವರು ಪೂಜಾರಿ ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನಿರಾಕರಿಸಿದರು. ಆ ಮೂಲಕ ತಾನೇ ಬಾಡಿಗೆ ಕಟ್ಟಿ ತೆರೆದಿದ್ದ ಕಾಂಗ್ರೆಸ್ ಕಚೇರಿಗೆ ಹೋಗುವುದನ್ನು ಪೂಜಾರಿ ಅವರು ಅನಿವಾರ್ಯವಾಗಿ ನಿಲ್ಲಿಸಬೇಕಾಯಿತು. ನಿಷ್ಠುರವಾದಿಯಾದ ನೇರ ನಡೆ- ನುಡಿಯ ಪೂಜಾರಿ ಅವರು ನಂತರದ ದಿನಗಳಲ್ಲಿ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಕರೆದು ಕಾಂಗ್ರೆಸ್ ಸರಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಇದೀಗ ಅದೆಲ್ಲ ಇತಿಹಾಸ.

ಇತ್ತೀಚಿನ ಸುದ್ದಿ

ಜಾಹೀರಾತು