11:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮತ್ತೆ ಕೊರೊನಾ ಹೆಚ್ಚಳ: ಖ್ಯಾತ ಹೃದಯ ತಜ್ಞ  ಡಾ.ದೇವಿ ಶೆಟ್ಟಿ ವೈರಾಣು ಸೋಂಕಿನ ಬಗ್ಗೆ ಹೇಳಿದ್ದೇನು?

25/04/2022, 23:39

ಹೊಸದಿಲ್ಲಿ(reporterkarnataka.com):ಕೊರೊನಾ 4ನೇ ಅಲೆಯ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಭಯ ಬೇಡ ಎಚ್ಚರ ವಹಿಸಿ ಎಂದು ಖ್ಯಾತ ಹೃದಯ ತಜ್ಞ ಡಾ. ದೇವಿ ಶೆಟ್ಟಿ ಸಲಹೆ ನೀಡಿದ್ದಾರೆ.

ಕೋವಿಡ್-19 ನಾಲ್ಕನೇ ಅಲೆಯ ಕುರಿತು ಭಯ ಪಡುವ ಅಗತ್ಯವಿಲ್ಲ. ಕೊಂಚ ಎಚ್ಚರ ಮತ್ತು ಏಕಾಗ್ರತೆ ವಹಿಸಿದರೆ ಸಾಕು. ನಮ್ಮ ನಿಗಾ ಸೋಂಕಿಗೆ ತುತ್ತಾದವರ ಮೇಲಲ್ಲ. ಬದಲಿಗೆ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಮೇಲಿರಬೇಕು ಎಂದು ಹೇಳಿದ್ದಾರೆ.

ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಜನರು ಮಾಸ್ಕ್ ಧರಿಸುವುದನ್ನು ಮುಂದುವರಿಸಿ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ಮೂರನೇ ಅಲೆಯ ಅಷ್ಟು ಗಂಭೀರವಾಗಿರಲಿಲ್ಲ, ಆದ್ದರಿಂದ ಭಯ ಪಡುವ ಅಗತ್ಯವಿಲ್ಲ. ನಾವು ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಖ್ಯೆಯನ್ನು ಮಾತ್ರ ನೋಡಬೇಕು. ಒಂದು ಲಕ್ಷ ಜನರು ಅಥವಾ 50,000 ಜನರು ಸೋಂಕಿಗೆ ತುತ್ತಾಗುತ್ತಾರೆ ಎಂದರೆ ಏನೂ ಅರ್ಥವಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ ಎಂದು ದೇವಿ ಶೆಟ್ಟಿ ಹೇಳಿದರು.

ಇಡೀ ದೇಶವು ಸೋಂಕಿಗೆ ತುತ್ತಾಗಬಹುದು, ಆದರೆ ಆಸ್ಪತ್ರೆಯಲ್ಲಿ ಯಾವುದೇ ಕೋವಿಡ್ ರೋಗಿಗಳಿಲ್ಲದಿದ್ದರೆ, ಯಾವುದೇ ಆತಂಕವಿಲ್ಲ. ಆದ್ದರಿಂದ ಆಸ್ಪತ್ರೆಯಲ್ಲಿನ ರೋಗಿಗಳ ಸಂಖ್ಯೆಯ ಮೇಲೆ ನಿಗಾ ವಹಿಸಬೇಕು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು