ಇತ್ತೀಚಿನ ಸುದ್ದಿ
ಮತ್ತೆ ಕಾಡಾನೆ ಅಟ್ಟಹಾಸ: ತರೀಕೆರೆ ಸಮೀಪ ಸಲಗ ದಾಳಿಗೆ ರೈತ ಸಾವು; ಅರಣ್ಯ ಇಲಾಖೆ ವಿರುದ್ಧ ಜನಾಕ್ರೋಶ
25/12/2022, 12:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporter Karnataka@gmail.com
ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ಜಮೀನು ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ನಡೆಸಿ ರೈತ ಸಾವನ್ನಪ್ಪಿದ್ದಾರೆ. ಕಾಡಾನೆಯಿಂದ ಮೃತಪಟ್ಟವರನ್ನು ಈರಪ್ಪ ಎಂದು ಗುರುತಿಸಲಾಗಿದೆ. ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಕಾಡಾನೆ ದಾಳಿ ಹಿನ್ನೆಲೆ ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.