3:28 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮತ್ತೆ ಖದರ್!: ಎಸ್ ಡಿಪಿಐ ಜತೆಗಿನ ತಾಂಟುವ ಆಟದಲ್ಲಿ ಅಂತರ ಹೆಚ್ಚಿಸಿ ಗೆದ್ದ ಖಾದರ್!

13/05/2023, 22:37

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಎಲ್ಲರ ಲೆಕ್ಕಾಚಾರದಂತೆ ಮಂಗಳೂರು ಕ್ಷೇತ್ರದಿಂದ
ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಗೆಲುವು ಸಾಧಿಸಿದ್ದಾರೆ. ಜತೆಗೆ ಗೆಲುವಿನ‌ ಅಂತರವನ್ನೂ ಹೆಚ್ಚಿಸಿಕೊಂಡಿದ್ದಾರೆ.
ಸತತ 5ನೇ ಬಾರಿ ವಿಧಾನಸಭೆ ಪ್ರವೇಶಿಸುತ್ತಿರುವ ಖಾದರ್ ಅವರಿಗೆ ಈ ಬಾರಿ ಟಫ್ ಫೈಟ್ ಎದುರಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಲೆಕ್ಕಾಚಾರ ಹಾಕಿದ್ದರು. ಕಾರಣ ಎಸ್ ಡಿಪಿಐ ಅಭ್ಯರ್ಥಿ ರಿಯಾಜ್ ಪರಂಗಿಪೇಟೆ ಅವರು ತೊಡೆ ತಟ್ಟಿ ಖಾದರ್ ವಿರುದ್ಧ ಸ್ಪರ್ಧೆಗಿಳಿದಿದ್ದರು. ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಗಿಂತ ಹೆಚ್ಚು ಖಾದರ್ ವಿರುದ್ಧ ಆರೋಪವನ್ನು ರಿಯಾಜ್ ಮಾಡಿದ್ದರು. ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಭ್ಯರ್ಥಿ ಗಳಾಗಿರುವುದರಿಂದ ಒಂದೇ ಸಮುದಾಯದೊಳಗಿನ ಜಗಳ ಮಾರನೇ ವ್ಯಕ್ತಿಗೆ ಸಹಾಯ ಮಾಡಿತು ಎಂದು ಜನರು ಅಂದುಕೊಂಡಿದ್ದರು. ಖಾದರ್- ರಿಯಾಜ್ ಫೈಟ್ ನಿಂದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಗೆ ನೆರವಾದೀತು ಎಂಬ ಲೆಕ್ಕಾಚಾರ ಕೇಳಿ ಬಂದಿತ್ತು. ಆದರೆ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಲೆಕ್ಕಾಚಾರವೆಲ್ಲ ತಲೆ ಕೆಳಗಾಗಿದೆ. ಎಸ್ ಡಿಪಿಐ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಮತ ಬಾಚಿಕೊಂಡರೂ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಂದ 23 ಸಾವಿರ ಮತಗಳ ಅಂತರದಲ್ಲಿ ಖಾದರ್ ಗೆಲುವಿನ ನಗೆ ಹೊರಸೂಸಿದ್ದಾರೆ.




ಖಾದರ್ ಗೆಲುವಿನ ಓಟವನ್ನು ತಡೆಯಲು ಬಿಜೆಪಿ ಪಾಳಯದಲ್ಲಿ ಭಾರೀ ಕಾರ್ಯತಂತ್ರ ನಡೆಯಲಿದೆ ಎಂಬ ಮಾಹಿತಿ ಆರಂಭದಲ್ಲಿದ್ದರೂ ನಂತರ ಅದು ಠುಸ್ ಎನಿಸಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರನ್ನು ಬಹುತೇಕ ಕ್ಷೇತ್ರಗಳಿಗೆ ಕರೆಸಿ ರೋಡ್ ಶೋ ನಡೆಸಿದ್ದರೂ ಸತೀಶ್ ಕುಂಪಲ ಪರ ಯಾವುದೇ ಸ್ಟಾರ್ ಕ್ಯಾಂಪೇನರ್ ಗಳನ್ನು ಕರೆಸದೆ ಬಿಜೆಪಿ ಕೈಚೆಲ್ಲಿ ಕುಳಿತ್ತಿತ್ತು. ಒಂದು ರೀತಿಯಲ್ಲಿ ಬಿಜೆಪಿ ಇಲ್ಲಿ ಸತೀಶ್ ಕುಂಪಲ ಅವರನ್ನು ಬಲಿಪಶು ಮಾಡಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು