8:12 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮತ್ತೆ ಮಣ್ಣು ಸೇರಿದ ‘ಬೆಟ್ಟದ ಹೂ’: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ 

31/10/2021, 09:19

ಬೆಂಗಳೂರು(reporterkarnataka.com) ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ನಡೆದಿದ್ದು, ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಮಾಧಿ ಮಾಡಲಾಯಿತು.


ವರನಟ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ಅವರ ಸಮಾಧಿಯ ಪಕ್ಕದಲ್ಲೇ ಕಿರಿಯ ಪುತ್ರನಾದ ಪುನೀತ್ ರಾಜ್ ಕುಮಾರ್ ಅವರನ್ನು ಸಮಾಧಿ ಮಾಡಲಾಯಿತು. ಅಂತಿಮ ವಿಧಿ ವಿಧಾನವನ್ನು ಸಹೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ನೆರವೇರಿಸಿದರು.


ಪಾರ್ಥಿವ ಶವದ ಅಂತಿಮ ಯಾತ್ರೆ ಬೆಳಿಗ್ಗೆ 6ಕ್ಕೆ ಆರಂಭವಾಯಿತು. ಕೆ.ಆರ್. ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್ ಮೂಲಕ, ಯಶವಂತಪುರ, ಆರ್ ಎಂ ಸಿ ಯಾರ್ಡ್, ಗೋರಗುಂಟೆಪಾಳ್ಯದ ಮೂಲಕ ಕಂಠೀರವ ಸ್ಟುಡಿಯೋಗೆ ತರಲಾಯಿತು.


ಪುನೀತ್ ರಾಜ್ ಕುಮಾರ್ ಅವರು ಗುರುವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು