1:09 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಮತ್ತೆ ಮತ್ತೆ ಭೂಕಂಪನ: ನಡುಗಿದ ಕಲ್ಲುಗುಂಡಿ, ಸಂಪಾಜೆ; ಭಯಬೇಡ, ಪಶ್ಚಾತ್ ಕಂಪನ ಅಷ್ಟೇ 

02/07/2022, 09:54

ಮಡಿಕೇರಿ(reporterkarnataka.com):
ಕೊಡಗು ಹಾಗೂ ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದೆ. ಇಂದು ಮುಂಜಾನೆ ‌ಭೂಮಿ ನಡುಗಿದೆ ಎಂಬ ಮಾಹಿತಿ ಇದೆ. ಭೂಕಂಪನದ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಭಾರೀ ಶಬ್ದದೊಂದಿಗೆ 6ನೇ ಬಾರಿ ಭೂಮಿ ಕಂಪಿಸಿದೆ. ಕಲ್ಲುಗುಂಡಿ , ಸಂಪಾಜೆ ಭಾಗಗಳಲ್ಲಿ ಭೂಮಿ ನಡುಗಿದೆ ಎನ್ನಲಾಗಿದೆ.

ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಂತಹ ‌ಸಂದೇಶಗಳಿಂದ ಜನರು ಭಯಪಡಬಾರದು. ಒಮ್ಮೆ ಕಂಪನವಾದಲ್ಲಿ ಅದರ ಪರಿಣಾಮ ಕೆಲವು ದಿನಗಳವರೆಗೆ ಇರುತ್ತದೆ. ಭೂಮಿಯ ಕೆಳಭಾಗದಲ್ಲಿ ನಡೆಯುತ್ತಿರುವ ನೈಸರ್ಗಿಕ ವಿದ್ಯಮಾನಗಳ ಪರಿಣಾಮ ಸಣ್ಣನೆಯ ಕಂಪನಗಳು ಸಂಭವಿಸಬಹುದು.

ಭೂಸ್ತರಭಂಗದಿಂದ ಕೆಲವು ದಿನ ಈ ನಡುಕ, ಕಂಪನಗಳು ನಡೆಯುವ ಸಾಧ್ಯತೆ ಇದ್ದು ಜನ ಆತಂಕಪಡಬೇಕಿಲ್ಲ ಎಂದು ಭೂಗರ್ಭ ತಜ್ಞರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು