2:11 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಫೋನ್ ಸದ್ದು: ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಗ್ನಲ್ ಪತ್ತೆ?

05/06/2022, 22:08

ಮಂಗಳೂರು(reporterkarnataka.com):ಕರಾವಳಿ ಪ್ರದೇಶದಲ್ಲಿ ಉಗ್ರಗಾಮಿ, ನಕ್ಸಲ್ ಚಟುವಟಿಕೆ ನಡೆಯುತ್ತಿದೆಯೇ? ಅಂತಹದೊಂದು ಗುಮಾನಿಗೆ ಮತ್ತೆ ಜೀವ ಬಂದಿದೆ. ಕರಾವಳಿ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಈಗಾಗಲೇ ಹಲವು ಬಾರಿ ಮತ್ತೆಯಾಗಿದೆ. ಇದೀಗ ಮತ್ತೆ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉಗ್ರಗಾಮಿಗಳ ಸ್ಲೀಪರ್ ಸೆಲ್‌ಗಳು ಕಾರ್ಯಾಚರಿಸುತ್ತಿವೆ ಎಂಬ ಗುಮಾನಿ ನಡುವೆ ಸ್ಯಾಟಲೈಟ್ ಫೋನ್ ಬಳಕೆ ಮತ್ತೆ ಮತ್ತೆ ಪತ್ತೆಯಾಗುತ್ತಿರುವುದು ಪೊಲೀಸ್ ಇಲಾಖೆಗೆ

 ಆತಂಕ ಮೂಡಿಸಿದೆ. 6 ತಿಂಗಳ ಬಳಿಕ ಕರಾವಳಿಯ 3 ಕಡೆಗಳಲ್ಲಿ ಹಾಗೂ ಚಿಕ್ಕಮಗಳೂರಿನ ದಟ್ಟಾರಣ್ಯದಲ್ಲಿ ನಿಷೇಧಿತ ಸ್ಯಾಟಟೈಟ್ ಫೋನ್‌ಗಳ ಸಿಗ್ನಲ್ ಪತ್ತೆಯಾಗಿದೆ. ಮೇ 23ರಿಂದ 29ರ ವರೆಗೆ ಮಂಗಳೂರಿನ ಎರಡು ಕಡೆ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಟ್ಟಾರಣ್ಯದಲ್ಲಿ ಸ್ಯಾಟಟೈಟ್ ಫೋನ್ ಬಳಕೆ ಮಾಡಿರುವುದನ್ನು ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಸ್ಥಳಕ್ಕೆ ತೆರಳಿ ತನಿಖೆ ಕೈಗೆತ್ತಿಕೊಂಡಿದೆ. ಕಳೆದ 10 ದಿನಗಳ ಅವಧಿಯಲ್ಲಿ ನಾಲ್ಕು ಕಡೆಗಳಿಂದ ಸ್ಯಾಟಲೈಟ್ ಫೋನ್ ಸಿಗ್ನಲ್ ಸಂಪರ್ಕಿಸಿರುವುದು ಪತ್ತೆಯಾಗಿದೆ. ಈ ಬಾರಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ

– ಶಿರಸಿಯ ಮಧ್ಯ ಇರುವ ದಟ್ಟಾರಣ್ಯ ಪ್ರದೇಶದಲ್ಲಿ, ಮಂಗಳೂರು ನಗರ ಹೊರಭಾಗದ ನಾಟೆಕಲ್, ಕುಳಾಯಿ ಹಾಗೂ ಚಿಕ್ಕಮಗಳೂರಿನ ಕಡೂರು-ಬೀರೂರು ನಡುವಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಸಿಗ್ನಲ್ ಪತ್ತೆಯಾದ ಪ್ರದೇಶಗಳಿಗೆ ತೆರಳಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು