2:03 AM Saturday20 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮತ್ತೊಮ್ಮೆ ಸೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ : ಹೊಗೆಮಯ ವಾತಾವರಣಕ್ಕೆ ಬೆಚ್ಚಿದ ಸ್ಥಳೀಯರು

12/08/2021, 20:44

ಬಜಪೆ(reporterkarnataka.com)
ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸಮೀಪದ ಎಸ್‌ಇಝಡ್‌ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಗುರುವಾರ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ


ಭಾರೀ ಪ್ರಮಾಣದ ಹೊಗೆ ಹರಡಿಕೊಂಡು ಸ್ಥಳೀಯರು ಭಯಭೀತರಾದ ಘಟನೆ ನೆಲ್ಲಿದಡಿಯಲ್ಲಿ ಇರುವ ಈ ಫ್ಯಾಕ್ಟರಿಯಲ್ಲಿ ನಡೆದಿದೆ.

ಕಳೆದ ಎಪ್ರಿಲ್‌ಲಲ್ಲಿ ಕೂಡ ಇದೇ ಕಂಪೆನಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ಬಗ್ಗೆ ದುರಸ್ತಿ ಕಾರ್ಯ ನಡೆಯುತ್ತಿತ್ತು ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಈ ರೀತಿಯಾಗಿ ಬೆಂಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಘಟನೆಯ ಬಗ್ಗೆ ಸಂಸ್ಥೆಯವರು ಖಚಿತ ಮಾಹಿತಿ ನೀಡಿಲ್ಲ. ಗುರುವಾರವು ಈ ಘಟಕದಲ್ಲಿ ಉದ್ಯೋಗಿಗಳ ಸಂಖ್ಯೆ ಕಡಿಮೆ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಮಂಗಳೂರು ಕದ್ರಿ ಅಗ್ನಿಶಾಮಕ ದಳ, ಎಚ್‌ಪಿಸಿಎಲ್, ಎನ್‌ಎಂಪಿಟಿ ಸಿಬ್ಬಂದಿ ವರ್ಗ ಬೆಂಕಿ ನಂದಿಸಿದರು.
ಘಟನಾ ಸ್ಥಳಕ್ಕೆ ಬಜೈ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು