7:50 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಮತ್ತೊಂದು ಪೋಕ್ಸೋ ಪ್ರಕರಣ: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಮತ್ತೆ ಬಂಧನ

20/11/2023, 20:09

ಅನುಷಾ ಬಸವರಾಜ ಪಾಟೀಲ್ ದಾವಣಗೆರೆ

info.reporterkarnataka.com

ಇಡೀ ದೇಶವನ್ನೇ ತಲ್ಲಣಗೊಳಿಸಿದ, ಹೆಣ್ಣು ಹೆತ್ತವರು ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಚಿಂತಿಸುವಂತೆ ಮಾಡಿದ ಚಿತ್ರದುರ್ಗದ ಮುರುಘಾ ಮಠದ ಲೈಂಗಿಕ ದೌರ್ಜನ್ಯ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಅಪ್ರಾಪ್ತ ವಯಸ್ಸಿನ ಹೆಣ್ಮಕ್ಕಳ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಇತ್ತೀಚೆಗೆ ಬಿಡುಗಡೆಗೊಂಡಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಅವರ ವಿರುದ್ಧ 2 ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಮುರುಘಾ ಅವರು ಜೈಲಿನಿಂದ ಬಿಡುಗಡೆಗೊಂಡಿದ್ದರು. ಆದರೆ ಎರಡನೇ ಪ್ರಕರಣದಲ್ಲಿ ಅವರನ್ನು ಮತ್ತೆ ಬಂಧಿಸಲಾಗಿದೆ.


ಮುರುಘಾ ಅವರನ್ನು 2ನೇ ಪೋಕ್ಸೋ ಪ್ರಕರಣದಲ್ಲಿ ಬಂಧಿಸಲು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅರೆಸ್ಟ್‌ ವಾರಂಟ್ ಜಾರಿ ಮಾಡಿತ್ತು. ವಾರಂಟ್‌ ಪಡೆದ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ನೇತೃತ್ವದ ಪೊಲೀಸರ ತಂಡ ಮುರುಘಾ ಅವರನ್ನು ದಾವಣಗೆರೆ ವಿರಕ್ತ ಮಠದಲ್ಲಿ ಬಂಧಿಸಿದೆ. ಅವರನ್ನು ಮತ್ತೆ ಚಿತ್ರದುರ್ಗಕ್ಕೆ ಕರೆದು ತರಲಾಗುತ್ತಿದೆ.
ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ 2022ರ ಸೆಪ್ಟೆಂಬರ್ 1ರಂದು ಮುರುಘಾ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ಅವರನ್ನು ಚಿತ್ರದುರ್ಗದ ಕಾರಾಗೃಹದಲ್ಲಿ ಇರಿಸಲಾಗಿತ್ತು. ಆರೋಪಿ ಮುರುಘಾ ಅವರ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು. ಬಳಿಕ, ಮುರುಘಾ ಅವರು ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಒಂದು ಪ್ರಕರಣದಲ್ಲಿ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು
ನವೆಂಬರ್ 16ರಂದು ಜೈಲಿನಿಂದ ಬಿಡುಗಡೆಗೊಳಿಸಲಾಗಿತ್ತು. ಜೈಲಿನಿಂದ ಹೊರ ಬಂದ ಬಳಿಕ ಮುರುಘಾ ಅವರು ದಾವಣಗೆರೆಯ ವಿರಕ್ತ ಮಠಕ್ಕೆ ಆಗಮಿಸಿದ್ದರು. ಆದರೆ, ಎರಡನೇ ಪ್ರಕರಣದಲ್ಲಿ ಈಗ ಮತ್ತೆ ಜೈಲು ಸೇರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು