12:13 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಮೇ 16ರಿಂದ 18: ಕಡಲನಗರಿ ಮಂಗಳೂರಿನಲ್ಲಿ ಮಾವು ಮೇಳ; ಬೆಳೆಗಾರರಿಗೆ ಅವಕಾಶ

05/05/2025, 19:46

ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆಯಡಿ ಮಾವು ಮೇಳವನ್ನು ಮೇ 16ರಿಂದ 18 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದು, ಮೇಳದಲ್ಲಿ ಭಾಗವಹಿಸುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಅರ್ಹ 20ರಿಂದ 25 ಮಾವು ಬೆಳೆಗಾರರಿಗೆ ಮಾವು ಹಣ್ಣು ಹಾಗೂ ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡಲು ಕೆಳಕಂಡ ಷರತ್ತು ಹಾಗೂ ನಿಬಂಧನೆಗಳನೊಳಪಟ್ಟಂತೆ ಅವಕಾಶ ಕಲ್ಪಿಸಲಾಗಿರುತ್ತದೆ.
ಮಾವು ಬೆಳೆ ಉತ್ಪಾದಿಸುವ ಪ್ರದೇಶದ ಆರ್.ಟಿ.ಸಿಯನ್ನು ಒದಗಿಸಬೇಕು. ಸಂಬಂಧಪಟ್ಟ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರವರಿಂದ ರೈತರು ಮಾವು ಬೆಳೆಗಾರರಾಗಿದ್ದು, ನೈಸರ್ಗಿಕ ಹಣ್ಣು ಮಾಡುತ್ತಿರುವ ಬಗ್ಗೆ ಧೃಢೀಕರಣವನ್ನು ಪಡೆದು ಅರ್ಜಿ ಫಾರಂ ಜೊತೆ ಕಡ್ಡಾಯವಾಗಿ ಲಗತ್ತಿಸಬೇಕು. ಇಲ್ಲವಾದಲ್ಲಿ ಪರಿಗಣಿಸಲಾಗುವುದಿಲ್ಲ. ಸ್ವತಃ ಜಮೀನು ಹೊಂದಿದ್ದು, ಮಾವು ಬೆಳೆಗೆ ಆದ್ಯತೆ ನೀಡಲಾಗುತ್ತದೆ. ನೈಸರ್ಗಿಕ ಹಣ್ಣು ಮಾಡಲಾದ ಮಾವು ಹಣ್ಣುಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗುತ್ತದೆ.
ರೈತರು ಮತ್ತು ಅಧಿಕಾರಿಗಳ ಸಮಿತಿ ಸಭೆಯಲ್ಲಿ ನಿಗದಿಪಡಿಸಿದ ಮಾರಾಟ ದರದಂತೆ ಮಾರಾಟ ಮಾಡಲು ಬದ್ಧರಿರಬೇಕು. ಸಂಬಂಧಪಟ್ಟ ಇಲಾಖೆಯಿಂದ ದೃಢೀಕರಣಗೊಂಡ ತೂಕ ಮತ್ತು ಅಳತೆ ಯಂತ್ರಗಳನ್ನು ಮಾರಾಟದ ಸಮಯದಲ್ಲಿ ಬಳಸಲು ಅವಕಾಶ ಕಲ್ಪಿಸಲಾಗುತ್ತದೆ. ಸ್ಥಳೀಯ ಮಾರಾಟದಾರರಿಗೆ ಅವಕಾಶ ಕಲ್ಪಿಸಲಾಗುತ್ತದೆ.
ಮೇ 5ರಿಂದ 9ರವರೆಗೆ ಅರ್ಜಿ ಫಾರಂನ್ನು ಪಡೆಯಬೇಕು. ಅರ್ಜಿ ಸಲ್ಲಿಸಲು ಮೇ 12 ಕೊನೆಯ ದಿನ. ಸಮಯ: ಅಪರಾಹ್ನ 3 ಗಂಟೆಯವರೆಗೆ ಸಂಪರ್ಕಿಸಬೇಕಾದ ಸಂಖ್ಯೆ: 0824-2423628, 0824-2444298.
ಮೇ 13ರಂದು ರೈತರ ಮತ್ತು ಅಧಿಕಾರಿಗಳ ಸಭೆ ನಡೆಸಿ ಮಾರಾಟ ದರ ನಿಗದಿಪಡಿಸುವ ಬಗ್ಗೆ ಚರ್ಚಿಸಿ ದರ ನಿಗದಿಪಡಿಸಲಾಗುವುದು ಹಾಗೂ ನಿಗದಿಪಡಿಸಲಾದ ದರಕ್ಕನುಗುಣವಾಗಿ ಮಾರಾಟ ಮಾಡಲು ಆಯ್ಕೆಯಾದ ರೈತರು ಬದ್ಧರಿರಬೇಕು.
ಆಸಕ್ತ ರೈತರು ಮಾವು ಮೇಳದಲ್ಲಿ ಹಣ್ಣು ಮತ್ತು ಇತರೆ ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡಲು ಇಚ್ಛಿಸಿದ್ದಲ್ಲಿ, ಸ್ವವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಲ್ಲಿಸುವಂತೆ ಹಾಗೂ ಜಿಲ್ಲೆಯ ರೈತರು ಹಾಗೂ ಗ್ರಾಹಕರು ಮಾವು ಮೇಳದ ಸದುಪಯೋಗವನ್ನು ಪಡೆಯಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು