4:20 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮೇ 20ರೊಳಗೆ ಎಸ್ಸೆಸ್ಸೆಲ್ಸಿ ರಿಸಲ್ಟ್ ; ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

08/05/2022, 20:09

ಬೆಂಗಳೂರು(reporterkarnataka.com):ಈಗಾಗಲೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶದ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮೇ 20ರೊಳಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ಎಲ್ಲಾ ತಯಾರಿ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಮೊದಲು ಮೇ 15ರ ಒಳಗೆ ಫಲಿತಾಂಶ ಹೊರಬೀಳುವ ನಿರೀಕ್ಷೆ ಇತ್ತಾದರೂ, ಕೆಲ ಮಂದಿ ಶಿಕ್ಷಕರು ಮೌಲ್ಯಮಾಪನಕ್ಕೆ ಗೈರಾದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಇದಕ್ಕೆ ಕಾರಣರಾದ ಶಿಕ್ಷಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆ ಸೂಚನೆ ನೀಡಲಾಗಿದೆ ಎಂದರು.

ಸದ್ಯ ಮೌಲ್ಯಮಾಪನ ಪ್ರಕ್ರಿಯೆ ಒಂದು ಹಂತಕ್ಕೆ ಮುಗಿದಿದ್ದು,ಅಂಕಗಳ ಕ್ರೋಢಿಕರಣ ಮಾಡಲಾಗುತ್ತಿದೆ. ಮುಂದಿನ ವಾರದಲ್ಲಿ ಫಲಿತಾಂಶ ಹೊರಬೀಳಲಿದ್ದು, ಮೇ 20ರ ಒಳಗೆ ರಿಸಲ್ಟ್ ಪಕ್ಕಾ ಎಂದು ಸಚಿವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು