10:26 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮೇ 24: ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಚಿಂತನೆ ಸಮಾವೇಶ

08/05/2026, 20:00

ಗಣೇಶ್ ಇನಾಂದಾರ್ ಬಳ್ಳಾರಿ

info.reporterkarnataka@gmail.com

ಕೇಂದ್ರ ಸರ್ಕಾರದಿಂದ ಕಲ್ಯಾಣ ಕರ್ನಾಟಕದಲ್ಲಿ 371(ಜೆ)ಜಾರಿಯಾಗಿ 14 ವರ್ಷಗಳೂ ಕಳೆದರೂ ಸಹ ಈ ಭಾಗದಲ್ಲಿ ಆರೋಗ್ಯ, ಶಿಕ್ಷಣ, ನಿರುದ್ಯೋಗ, ಸಾಮಾಜಿಕ ಮಾನವ ಸಂಪನ್ಮೂಲದಲ್ಲಿ ಯಾವುದೇ ಪ್ರಗತಿಯಾಗದೆ ಈ ಜಿಲ್ಲೆಗಳು ಹಿಂದುಳಿದಿವೆ ಎಂದು ಕಲ್ಯಾಣ ಕರ್ನಾಟಕ ಭಾಗದ ಹೋರಾಟಗಾರರಾದ ರಾಘವೇಂದ್ರ ಕುಷ್ಟಗಿ ಹೇಳಿದರು.
ಬಳ್ಳಾರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಆರೋಗ್ಯ,ಶಿಕ್ಷಣ,ಉದ್ಯೋಗ, ವಸತಿ,ಸಾಮಾಜಿಕ ಸೇರಿದಂತೆ ಮಾನವ ಸಂಪನ್ಮೂಲಗಳ ಪ್ರಗತಿಯಲ್ಲಿ ಇಡೀ ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಭಾಗವು ಹಿಂದುಳಿದಿದ್ದುದರಿಂದ ಈ ಜಿಲ್ಲೆಗಳಲ್ಲಿನ ಯುವ ಸಮುದಾಯಕ್ಕೆ ಉದ್ಯೋಗ, ಶಿಕ್ಷಣ ವಲಯಗಳಿಗೆ ವಿಶೇಷ ಪ್ರಾತಿನಿಧ್ಯವನ್ನು ನೀಡುವಂತೆ ಹೋರಾಟ ಮಾಡುವ ಮೂಲಕ 371(ಜೆ) ನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿತ್ತು. ಹೆಸರಿಗೆ ಕಲ್ಯಾಣ ಕರ್ನಾಟಕ ಆದರೆ ಇಲ್ಲಿ ಕಲ್ಯಾಣವೇ ಆಗಿಲ್ಲ ಎಂದು ಆರೋಪಿಸಿದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ 371(ಎ) ಸೇರಿದಂತೆ ಹಲವು ವಿಷಯಗಳ ಕುರಿತು ಹೈದ್ರಬಾದ್ ಕರ್ನಾಟಕ ಜನಾಂದೋಲನ ಕೇಂದ್ರದಿಂದ ರಾಯಚೂರಿನ ಕೊಠಾರಿ ಫಂಕ್ಷನ್ ಹಾಲ್ನಲ್ಲಿ ಮೇ 24 ರಂದು ಸಮಾವೇಶ, ದುಂಡು ಮೇಜಿನ ಸಭೆ ಹಮ್ಮಿಕೊಂಡಿದೆಂದು ತಿಳಿಸಿದರು.
ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಅಸ್ತಿತ್ವಕ್ಕೆ ಬಂದಿದ್ದ ಸಂಜುಡಪ್ಪ ಕಮಿಟಿಯ ವರದಿಯ ಆಧಾರದಲ್ಲಿ ಮಂಜೂರಾದ ಸಾವಿರಾರು ಕೋಟಿ ಹಣ ಭ್ರಷ್ಟರ ಪಾಲಾಗಿ ಹೋಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಭ್ರಷ್ಟ ಅಧಿಕಾರಿಗಳ ಮತ್ತು ದುಷ್ಕ ಗುತ್ತಿಗೆದಾರರ ಎಟಿಎಂ ಆಗಿ ಕೆಲಸ ಮಾಡಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಸ್ಥಿತ್ವಕ್ಕೆ ಬಂದು 12 ವರ್ಷಗಳು ಗತಿಸಿವೆ. ಸುಮಾರು 16 ಸಾವಿರ ಕೋಟಿ ಹಣ ಮಂಜೂರು ಮಾಡಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ 2022ರಲ್ಲಿ ಬಂದ ಸಿಎಜಿ( ಮಹಾಲೆಕ್ಕ ಪರಿಶೋಧಕರ) ವರದಿ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 7 ಸಾವಿರಕ್ಕೂ ಹೆಚ್ಚು ಕೋಟಿ ಹಣ ದುರುಪಯೋಗಾವಾಗಿದೆ ಎಂದು ದಾಖಲಿಸಿದೆ.
ಕಳೆದ ಅರ್ಥಿಕ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ 5 ಸಾವಿರ ಕೋಟಿಗಳ ಪೈಕಿ ಕೇವಲ 8 ನೂರು ಕೋಟೆಗಳಿಗೆ ಮಾತ್ರ ಕ್ರಿಯಾ ಯೋಜನೆಯನ್ನು ಸಲ್ಲಿಸಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳನ್ನು ಡಬ್ಲೂಎಪಿಸಿಒಎಸ್ ಎಂಬ ಕೇಂದ್ರ ಸರ್ಕಾರದ ಮೂಲಕ ಇನ್ನೆಕ್ಷನ್ ಮಾಡಿಸಬೇಕೆಂದು ಸರ್ಕಾರದ ಆದೇಶವಿದ್ದರೂ ಕೂಡ ಕೆಕೆಆರ್ ಡಿ ಬಿ ಕಾರ್ಯದರ್ಶಿ ಈ ಆದೇಶವನ್ನು ಪಾಲನೆ ಮಾಡಿಲ್ಲ. ಇಂತಹ ಹಲವು ಕಾರಂಗಳಿಂದ ಈ ಪ್ರದೇಶದ ಅಭಿವೃದ್ಧಿ ಕುಂಠಿತವಾಗಿದೆಂದರು. ಶಿಕ್ಷರಿಲ್ಲದ ಶಾಲೆಗಳು, ವೈದ್ಯರಿಲ್ಲದ ಆಸ್ಪತ್ರೆಗಳು, ಉದ್ಯೋಗ ದೊರೆಯದೆ ಹತಾಶರಾದ ವಿದ್ಯಾವಂತ ನಿರುದ್ಯೋಗಿಗಳು, ಗುಳೆ ಹೋಗಿ ಬದುಕು ಸಾಗಿಸುತ್ತಿರುವ ಗ್ರಾಮೀಣ ಜನರ ದುಸ್ಥಿತಿ ಇಲ್ಲಿದೆಂದರು.
ಅದಕ್ಕಾಗಿ ಸಾಮಾಜಿಕ ಕಳಕಳಿಯ ಪ್ರಜ್ಞಾವಂತ ನಾಗರಿಕರು ಮೂಕ ಪ್ರೇಕ್ಷಕರಾಗಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಈ ಪ್ರದೇಶದ ಅಭಿವೃದ್ಧಿಗಾಗಿ ಅನ್ಯಾಯಗಳ ವಿರುದ್ಧ ಅಸಮಾನತೆ ನಿವಾರಣೆಗಾಗಿ ಮತ್ತೊಂದು ದೊಡ್ಡ ಚಳುವಳಿಯ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಸಮಾವೇಶ ನಡೆಸಲಿದೆಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್. ಪನ್ನಾರಾಜ್ ಆರ್. ಮಾಧವರೆಡ್ಡಿ, ಈರಣ್ಣ ಮೂಲಿಮನಿ, ಟಿ ಎಂ ಶಿವಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು